ದೊಡ್ಡಬಳ್ಳಾಪುರದಲ್ಲಿ ನಮೋ ಬ್ರಿಗೇಡ್ ಟೀ ಸ್ಟಾಲ್ ಉದ್ಘಾಟನೆ
ಕ.ಪ್ರ.ವಾರ್ತೆ ್ಣ ದೊಡ್ಡಬಳ್ಳಾಪುರ ್ಣ ಫೆ.23
ದೊಡ್ಡಬಳ್ಳಾಪುರದಲ್ಲಿ ನಮೋ ಬ್ರಿಗೇಡ್ ಟೀ ಸ್ಟಾಲ್ ಅನ್ನು ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಉದ್ಘಾಟಿಸಿದರು.
ಇಲ್ಲಿನ ಕೊಂಗಾಡಿಯಪ್ಪ ಕಾಲೇಜು ಮುಂಭಾಗದಲ್ಲಿ ಈ ಟೀ ಸ್ಟಾಲ್ ಉದ್ಘಾಟನೆಗೊಂಡಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಈ ದೇಶದ ಮುಂದಿನ ಪ್ರಧಾನಿ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ದೇಶದ ಜನ ಬದಲಾವಣೆಯನ್ನು ಸ್ಪಷ್ಟವಾಗಿ ಬಯಸಿದ್ದಾರೆ. ಕಾಂಗ್ರೆಸ್ನ ದುರಾಡಳಿತದಿಂದ ಬೇಸತ್ತಿರುವ ಜನಕ್ಕೆ ಮಹತ್ವಾಕಾಂಕ್ಷೆಯ ನಾಯಕನಾಗಿ ಮೋದಿ ಗೋಚರಿಸುತ್ತಿದ್ದಾರೆ ಎಂದರು.
ಇಡೀ ದೇಶದಲ್ಲಿ ಇಂದು ಮೋದಿ ಪರ ಅಲೆ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಪ್ರಚಂಡ ಗೆಲವು ದಾಖಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ವೆಂಕಟರಾಜು ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
ಇಂದು ನಮೋ ಭಾರತ್: ಇಲ್ಲಿನ ದೊಡ್ಡಬಳ್ಳಾಪುರ ನಮೋ ಬ್ರಿಗೇಡ್ ನೇತೃತ್ವದಲ್ಲಿ ನಮೋ ಭಾರತ್ ಕಾರ್ಯಕ್ರಮ ಫೆ.24ರ ಸೋಮವಾರ ಸಂಜೆ 4.30ಕ್ಕೆ ಪಿಎಲ್ಡಿ ಬ್ಯಾಂಕ್ ಮುಂಭಾಗದ ಆವರಣದಲ್ಲಿ ನಡೆಯಲಿದೆ. ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘಟನೆಯ ಸಂಚಾಲಕ ವಿ.ಮುರಳಿ ಕುಮಾರ್ ತಿಳಿಸಿದ್ದಾರೆ. ಮೋದಿ ಕನಸಿನ ಭಾರತ ನಿರ್ಮಾಣಕ್ಕೆ ಒತ್ತು ನೀಡಿ ಸ್ವಾಭಿಮಾನಿ ಚಿಂತನೆಗಳನ್ನು ಬೆಳೆಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಯುವಪಡೆಯ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಸಂಚಾಲಕ ಪಣೀಶ್ಕುಮಾರ್, ನಗರಸಭಾ ಸದಸ್ಯ ಶಿವಶಂಕರ್, ಕಾರ್ಯಕರ್ತರಾದ ಸುರೇಶ್, ಶಿವು, ದೀಪಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

