ಬೆಂಗಳೂರು ಗ್ರಾಮಾಂತರ

28ಕ್ಕೆ ಗ್ರಾಪಂ ಅಧ್ಯಕ್ಷರ ಚುನಾವಣೆ

Published On :

ಸೂಲಿಬೆಲೆ: ಇಲ್ಲಿನ ಗ್ರಾಪಂದ ಅಧ್ಯಕ್ಷ ಸ್ಥಾನದ ಚುನಾವಣಿ ಫೆ.28ರಂದು ನಡೆಯಲಿದೆ. ಹಾಲಿ ಅಧ್ಯಕ್ಷ ಕೆ.ನಾರಾಯಣಪ್ಪ ತಮ್ಮ ಸ್ಥಾನಕ್ಕೆ ಜ.27 ರಂದು ರಾಜಿನಾಮೆ ನೀಡಿದ್ದರು. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಹೊಂದಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದ್ದು, ಹಾಲಿ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತ ಚುಕ್ಕಾಣಿ ಹಿಡಿದಿದ್ದರು. ಒಟ್ಟು 22 ಸದಸ್ಯ ಸ್ಥಾನಗಳನ್ನು ಹೊಂದಿದ್ದು, ಚುನಾವಣೆ ಕಾರ್ಯವನ್ನು ಹೊಸಕೋಟೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಅಧಿಕಾರಿ ನಡೆಸಲಿದ್ದಾರೆ. ಚುನಾವಣಿ ಸಂಬಂಧ ಎಲ್ಲ ಸದಸ್ಯರಿಗೆ ನೊಟೀಸ್ಗಳನ್ನು ಜಾರಿ ಮಾಡಲಾಗಿದೆ.



ಮಹಾಶಿವರಾತ್ರಿ, ಕುಂಭಾಭಿಷೇಕ
ಮಾಗಡಿ: ತಾಲೂಕಿನ ಸೋಲೂರು ಹೋಬಳಿ ಪಾಲನಹಳ್ಳಿ ಮಠದ ಶ್ರೀ ಶನೇಶ್ವರಸ್ವಾಮಿ ದೇವಾಲಯದಲ್ಲಿ  ಫೆ.27 ಮತ್ತು 28 ರಂದು ಮಹಾಶಿವರಾತ್ರಿ ಮತ್ತು 17ನೇ ವಾರ್ಷಿಕೋತ್ಸವ ಹಾಗೂ 1008 ಕಳಸಗಳ ಕುಂಭಾಭಿಷೇಕ ಏರ್ಪಡಿಸಿರುವುದಾಗಿ ಮಠದ ಅಧ್ಯಕ್ಷರು ಹಾಗೂ ಧರ್ಮಾಧಿಕಾರಿ ಡಾ. ಸಿದ್ದರಾಜು ತಿಳಿಸಿದ್ದಾರೆ.



ಬೂತ್ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ
ಸೂಲಿಬೆಲೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಫೆ.26 ರಂದು ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಜನತೆ ಅಧ್ಯಕ್ಷ ಬೆಂಡಿಗಾನಹಳ್ಳಿ ಬಿ.ವಿ ಸತೀಶ್ ಗೌಡ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ, ಸದಾನಂದಗೌಡ, ಮಾಜಿ ಮಂತ್ರಿಗಳಾದ ಬಿ.ಎನ್. ಬಚ್ಚೇಗೌಡ, ಆರ್.ಅಶೋಕ್, ಈಶ್ವರಪ್ಪ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸತೀಶ್ ಗೌಡರು ಕೋರಿದ್ದಾರೆ.
ಇಂದು ಮಿಶ್ರ ತಳಿ ಕರು, ಹಸುಗಳ ಪ್ರದರ್ಶನ
ಸೂಲಿಬೆಲೆ: ಇಲ್ಲಿಗೆ ಸಮೀಪದ ತಿಮ್ಮಪ್ಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಫೆ.25 ರಂದು ಮಿಶ್ರ ತಳಿ ಕರು ಹಾಗೂ ಹಸುಗಳು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಎನ್. ಗೋಪಾಲಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಸತೀಶ್ ಗೌಡ, ತಾಪಂ ಸದಸ್ಯ ರಾಜಶೇಖರ್ ಗೌಡ, ಉದ್ಯಮಿ ಬೈರೇಗೌಡ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಹಕಾರ ಸಂಘದ ಪ್ರಕಟಣಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.