ಬೆಂಗಳೂರು ಗ್ರಾಮಾಂತರ

ಮಾ. 7ರಿಂದ 10ನೇ ವಾರ್ಷಿಕೋತ್ಸವ

Published On :

ಮಾಗಡಿ: ತಾಲೂಕಿನ ಜೋಡಗಟ್ಟೆ ಗ್ರಾಮದಲ್ಲಿ ಯೋಗ ಶ್ರೀ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಮಾರ್ಚ್ 7 ರಿಂದ 10 ರವರೆಗೆ 10ನೇ ವಾರ್ಷಿಕೋತ್ಸವ ಏರ್ಪಡಿಸಲಾಗಿದ್ದು, ಇದರ ಪ್ರಯುಕ್ತ  ಶ್ರೀಮಹಾ ಗಣಪತಿ, ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಆದಿತ್ಯಾ ನವಗ್ರಹ ಪ್ರತಿಷ್ಠಾಪನೆ, ನೂತನ ವಿಮಾನಗೋಪುರದ ಕುಂಭಾಭಿಷೇಕ ಮತ್ತು ಗುರುವಂದನಾ ಕಾರ್ಯಕ್ರಮ ಏರ್ಪಡಿಸಿರುವುದಾಗಿ ಪ್ರಧಾನ ಅರ್ಚಕ ರಾಣೋಜಿರಾವ್ ತಿಳಿಸಿದ್ದಾರೆ. ಮಾರ್ಚ್ 7 ಮತ್ತು 8 ರಂದು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ. ಮಾರ್ಚ್ 9 ರಂದು  ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠಾಧ್ಯಕ್ಷ, ಶಿವಕುಮಾರಸ್ವಾಮಿಜೀ, ಕಿರಿಯ ಶ್ರೀಗಳಾದ ಸಿದ್ದಲಿಂಗಸ್ವಾಮೀಜಿ, ಬೆಟ್ಟಹಳ್ಳಿ ಮಠದ ಉರಿಗದ್ದಿಗೇಶ್ವರ ಕ್ಷೇತ್ರದ ಚಂದ್ರಶೇಖರ ಶಿವಚಾರ್ಯಸ್ವಾಮೀಜಿ, ಹಿತ್ತಲ ಮಠದ ಸದಾಶಿವ ಶಿವಾಚಾರ್ಯಸ್ವಾಮೀಜಿ, ಗುಮ್ಮಸಂದ್ರ ಮಠದ ಚಂದ್ರಶೇಖರಸ್ವಾಮೀಜಿ, ಗವಿನಾಗಮಂಗಲ ಮಠದ ಚನ್ನವೀರಶಾಸ್ಚ್ರಿ ಇತರರು ನೂತನ ವಿಮಾನಗೋಪುರಕ್ಕೆ ಕುಂಭಾಭಿಷೇಕ ಮತ್ತು ಯೋಗ ಮುನೇಶ್ವರಸ್ವಾಮಿಗಳಿಗೆ ಅಭಿಷೇಕ ನೆರವೇರಿಸಲಿದ್ದಾರೆ.  ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಾಮೂಹಿಕ ವಿವಾಹ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ಸಿ. ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಸೇವಕ ಕೆ. ಬಾಗೇಗೌಡ, ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಎ.ಮಂಜು, ಬಿಡಿಸಿಸಿ ಬ್ಯಾಂಕ್  ಅಧ್ಯಕ್ಷ ಎಚ್.ಎನ್. ಅಶೋಕ್ ಸೇರಿದಂತೆ ಅನೇಕ ಗಣ್ಯರು, ಭಕ್ತರು ಗ್ರಾಮಸ್ಥರು ಭಾಗವಹಿಸಲಿದ್ದಾರೆ. ಮಾರ್ಚ್ 10 ರಂದು ಜೋಡಗಟ್ಟೆ ಗ್ರಾಮದಲ್ಲಿ ದೇವರ ಭವ್ಯ ಮೆರವಣಿಗೆ ನಡೆಯಲಿದೆ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ
ಮಾಗಡಿ: ಇಲ್ಲಿನ ಶ್ರೀ ಸಿದ್ದರಾಮೇಶ್ವರ ಚಾರಿಟಬಲ್ ಎಜುಕೇಷನ್ ಅಂಡ್ ಚಾರಿಟಬಲ್ ಟ್ರಸ್ಟ್ನ  ಸಂಕಲ್ಪ ವಿದ್ಯಾ ಕೇಂದ್ರ ವತಿಯಿಂದ ಆಸಕ್ತ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಆಯೋಜಿಸಲಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27745025,  ಮೊ.9742015799 ಸಂಪರ್ಕಿಸಿ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.