ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟ ಗ್ರಾಪಂ ಅಧ್ಯಕ್ಷ ಬಂಧನ, ಬಿಡುಗಡೆ

Published On :

ಆನೇಕಲ್ಲು: ಅರಣ್ಯ ಇಲಾಖೆಯ ಒತ್ತುವರಿ ಜಮೀನು ತೆರವು ಹಾಗೂ ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸಿದರೆಂಬ ಆರೋಪದ ಮೇರೆಗೆ ಬನ್ನೇರುಘಟ್ಟ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮದನಗಿರಿ ಹಾಗೂ ಸದಸ್ಯ ವೆಂಕಟೇಶ್ ಅವರನ್ನು ಬಂಧಿಸಿದ್ದ ಬನ್ನೇರುಘಟ್ಟ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಶನಿವಾರ ನ್ಯಾಯಾಂಗ ಬಂಧನಕ್ಕೆ ಆದೇಶವಾದ ನಂತಹ ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ವಿಕ್ಟೋರಿಯ ಹಾಗೂ ಜಯದೇವ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದರು. ನಂತರ ಮಂಗಳವಾರ ನ್ಯಾಯಾಲಯಕ್ಕೆ ಕರೆತರಲಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ದೀರ್ಘ ತಪಾಸಣೆ ವರದಿ ಆಧಾರದ ಮೇರೆಗೆ ನ್ಯಾಯಾಲಯ ಜಾಮೀನು ನೀಡಿತು ಎಂದು ಬನ್ನೇರುಘಟ್ಟ ಪಿಎಸ್ಸೈ ನರೇಂದ್ರ ಕುಮಾರ್ ತಿಳಿಸಿದ್ದಾರೆ. ತಮ್ಮ ನೆಚ್ಚಿನ ನಾಯಕನ ಬಿಡುಗಡೆಯಿಂದ ಬನ್ನೇರುಘಟ್ಟ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮಂಗಳವಾರ ಸಂಜೆ  ಪಂಚಾಯ್ತಿ ಕಚೇರಿ ಬಳಿ ಸಭೆ ಸೇರಿ ರಸ್ತೆ ತೆರವಿನ ಬಗ್ಗೆ ಚರ್ಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.