ಕೆರೆಯಲ್ಲಿ ಅಪರಿಚಿತ ಶವ ಪತ್ತೆ
ದೊಡ್ಡಬಳ್ಳಾಪುರ: ನಗರದ ಹೊರವಲಯದ ಮುತ್ತೂರು ಗ್ರಾಮದ ಕೆರೆಯಲ್ಲಿ ಅಪರಿಚಿತ ಶವವೊಂದು ಗುರುವಾರ ಪತ್ತೆಯಾಗಿದೆ. ಕೆರೆಯಲ್ಲಿ ಈಜಲು ಬಂದು ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಆತನ ಬಟ್ಟೆ ಕೆರೆ ದಡದಲ್ಲಿ ಪತ್ತೆಯಾಗಿರುವ ಈ ಅನುಮಾನಕ್ಕೆ ಸಾಕ್ಷಿಯಾಗಿವೆ.
ಗುರುವಾರ ಬೆಳಗ್ಗೆ ಕೆರೆಯಲ್ಲಿ ಶವ ತೇಲಿದೆ. ವ್ಯಕ್ತಿಯ ವಯಸ್ಸು ಸುಮಾರು 24 ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ರೇಲ್ವೆ ನಿಲ್ದಾಣದ ಪಕ್ಕದಲ್ಲಿ ಇದ್ದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಶವ ನೋಡಲು ಜನ ತಂಡೋಪತಂಡವಾಗಿ ಸೇರಿದ್ದರು. ವ್ಯಕ್ತಿಯ ಬಗ್ಗೆ ವಿವರಗಳು ಇನ್ನೂ ಲಭ್ಯವಾಗಿಲ್ಲ. ದೊಡ್ಡಬಳ್ಳಾಪುರ ನಗರ ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕ ಕೃಷ್ಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗೆ ಶವವನ್ನು ರವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

