ಅರ್ಕೇಶ್ವರಸ್ವಾಮಿ ದೇಗುಲದಲ್ಲಿ ಸ್ವಾಮಿ ದರ್ಶನ
ರಾಮನಗರ : ನಗರದ ಅರ್ಕಾವತಿ ನದಿಯ ದಂಡೆಯ ಮೇಲೆ ನೆಲೆಸಿರುವ ಅರ್ಕೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯಕ್ತ ಗುರುವಾರ ವಿಶೇಷ ಪೂಜೆಗಳು, ಅಭಿಷೇಕ ಸೇವೆಗಳು ನಡೆದವು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.
ಪಶ್ಚಿಮಾಭಿಮುಖಿಯಾಗಿ ಸ್ಥಾಪಿತವಾಗಿರುವ ಈಶ್ವರ ದೇವಾಲಯಗಳು ವಿರಳ ಎಂದು ಹೇಳಲಾಗಿದ್ದು, ಇಲ್ಲಿನ ಅರ್ಕೇಶ್ವರ ಸ್ವಾಮಿಯ ದರ್ಶನ ಪಡೆದರೆ ಕಾಶಿ ವಿಶ್ವನಾಥನ ದರ್ಶನ ಪಡೆದಷ್ಟೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಸ್ಥಳೀಯರಲ್ಲಿದೆ.
ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರ ದೇವಾಲಯದಲ್ಲಿ ಸ್ಥಾಪನೆಯಾಗಿರುವ ಜಲಕಂಠೇಶ್ವರ ಸ್ವಾಮಿಗೆ ಭಕ್ತರೇ ಜಲಾಭಿಷೇಕ ನೆರವೇರಿಸುವ ವ್ಯವಸ್ಥೆ ಮಾಡಿಲಾಗಿದೆ. ಸಾಯಿಬಾಬ ಮಂದಿರದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳನ್ನು ಸ್ಥಾಪಿಸಲಾಗಿತ್ತು. ಲಿಂಗಾಕೃತಿಯ ಈಶ್ವರನಿಗೆ ಭಸ್ಮಾಭಿಷೇಕ ಮತ್ತು ಸಾಯಿಬಾಬ ಮೂರ್ತಿಗೆ ಭಕ್ತರೇ ಕ್ಷೀರಾಭಿಷೇಕ ಮಾಡಿ ಪುನೀತರಾದರು. ತಾಲೂಕಿನ ಪಾಲಾಬೋವಿ ದೊಡ್ಡಿಯಲ್ಲಿ ಶಿವರಾತ್ರಿ ಪ್ರಯುಕ್ತ ಶ್ರೀ ಮಲೆಮಹದೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ನೆರೆವೇರಿತು. ಈ ಸಂದರ್ಭದಲ್ಲಿ ಮಹದೇಶ್ವರ ಕರಗ ಮಹೋತ್ಸವವು ಶ್ರದ್ಧೆ, ಭಕ್ತಿಯಿಂದ ನೆರೆವೇರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

