ನೆಲಮಂಗಲ ತಾ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಜ್ಜು
ಕ.ಪ್ರ. ವಾರ್ತೆ ನೆಲಮಂಗಲ್ಣ ಫೆ.27
ಪಟ್ಟಣದ ಪವಾಡ ಶ್ರೀ ಬಸವಣ್ಣದೇವರ ಮಠದಲ್ಲಿ ಮಾ. 1ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 7ನೇ ನೆಲಮಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಜ್ಜಾಗಿದೆ.
ನೆ.ವಿಶ್ವನಾಥ್ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಬೆಳಿಗ್ಗೆ 8-30ಕ್ಕೆ ತಹಸೀಲ್ದಾರ್ ಡಾ.ಎನ್.ಆರ್.ಗೀತಾ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.
ತಾ.ಕ.ಸಾ.ಪ.ಅಧ್ಯಕ್ಷ ಎನ್. ರಾಜಶೇಖರ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ . ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ . ಪುಸ್ತಕ ಮಳಿಗೆಗಳ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯಕ್ ನೆರವೇರಿಸಲಿದ್ದಾರೆ.
ಸಾನಿಧ್ಯವನ್ನು ಶಿವಗಂಗೆ ಮೇಲಣಗವಿ ವೀರಸಿಂಹಾಸನ ಮಠದ ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಪವಾಡ ಶ್ರೀ ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಯನ್ನು ಕವಿ-ವಿಮರ್ಶಕ ಡಾ.ರಾಮಲಿಂಗಪ್ಪ ನುಡಿಯಲಿದ್ದಾರೆ. ಮಧ್ಯಾಹ್ನ 12.30ಕ್ಕೆ ವಿಚಾರ ಗೋಷ್ಠಿ ನಡೆಯಲಿದೆ. ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಲೇಖಕ ಎಂ.ವಿ.ನೆಗಳೂರ ವಹಿಸಲಿದ್ದು, ಖ್ಯಾತ ವೈದ್ಯ ಡಾ.ಎಂ.ಜಯಪ್ರಸಾದ್ ಆಶಯ ನುಡಿ ನುಡಿಯಲಿದ್ದಾರೆ.
ಹಲವಾರು ಸಾಹಿತಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಸಾಹಿತ್ಯ ಪ್ರಿಯರಿಗೆ ರಸದೌತಣ ಕಾದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

