ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ಸೋಮನಾಥ ಲಿಂಗ ದರ್ಶನ
ದೇವನಹಳ್ಳಿ: ಇಲ್ಲಿನ ಪ್ರಶಾಂತನಗರದಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಗುರುವಾರ ಸೋಮನಾಥ ಲಿಂಗ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
ವಿಜಯಪುರ ಬಸವಕಲ್ಯಾಣ ಮಠದ ಶ್ರೀ ಮಹದೇವ ಸ್ವಾಮೀಜಿ ಅವರು ಸೋಮನಾಥ ಲಿಂಗಕ್ಕೆ ಪೂಜೆ ಸಲ್ಲಿಸಿ ಶಿವಧ್ವಜಾರೋಹಣ ನಂತರ ಆಯೋಜಿಸಿದ್ದ ಸಭೆಯಲ್ಲಿ ಆಶೀರ್ವಚನ ನೀಡಿ ಇಡೀ ವಿಶ್ವದ ಅನೇಕ ಭಾಗಗಳಲ್ಲಿ ಮಹಾ ಶಿವರಾತ್ರಿ ಆಚರಿಸಲಾಗುತ್ತಿದೆ. ಪ್ರಮುಖವಾಗಿ ನಮ್ಮ ಭಾರತದಲ್ಲಿ ಶಿವಮಂದಿರಗಳಲ್ಲಿ ವಿಶೇಷ ಪೂಜೆ ಅಭಿಷೇಕ ಪ್ರಾರ್ಥನೆ ಭಜನೆಗಳು ನಡೆಯುತ್ತವೆ ಎಂದರು.
ಈಶ್ವರೀಯ ವಿದ್ಯಾಲಯದ ಸುಕನ್ಯಕ್ಕ ಮಾತನಾಡಿದರು.
ಈ ಸಂಧರ್ಭದಲ್ಲಿ ಹಿರಿಯ ಶರಣೆ ಶಾರದಮ್ಮ, ದೊಡ್ಡಸಣ್ಣೆಯ ಸಮಾಜ ಸೇವಕ ಮುನಿರಾಜು, ಪುರಸಭೆ ಮಾಜಿ ಸದಸ್ಯೆ ಕೃಷ್ಣಕುಮಾರಿ ಉಪಸ್ಥಿತರಿದ್ದರು. ಸಭೆಗೆ ಆಗಮಿಸಿದ ಎಲ್ಲರಿಗೂ ತಿಲಕವಿಟ್ಟು ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

