ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಸೂಲಿಬೆಲೆ: ಪಟ್ಟಣದಲ್ಲಿರುವ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲ ಹನುಮಂತಪ್ಪ ತಿಳಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು ಕೋಲಾಟ ನೃತ್ಯದಲ್ಲಿ ಪ್ರಥಮ ಬಹುಮಾನ ಪಡೆದು ಬಿಜಾಪುರದಲ್ಲಿ ನಡೆಯವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಕಿ ಪೂರ್ಣಿಮ ನೃತ್ಯ ತರಬೇತಿಯನ್ನು ನೀಡಿದ್ದು, ಪ್ರಾಂಶುಪಾಲ ಹನುಮಂತಪ್ಪ ಹಾಗೂ ನಿಲಯ ಪಾಲಕ ರಾಮಲಿಂಗಪ್ಪ, ಸಿಬ್ಬಂದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯನ್ನು ಅಭಿನಂದಿಸಿದ್ದಾರೆ.
ಮಾತಿನ ಚಕಮಕಿ: ಹೊಡೆದಾಟ
ಸೂಲಿಬೆಲೆ: ಹೊಸಕೋಟೆ ತಾ.ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗಡಿಗೇನಹಳ್ಳಿ ಗ್ರಾಮದಲ್ಲಿ ಡಿ.31 ರಂದು ರಾತ್ರಿ ಎರಡು ಗುಂಪುಗಳು ಹೊಸ ವರ್ಷ ಆಚರಣೆ ವಿಷಯದಲ್ಲಿ ಮಾತಿಗೆ ಮಾತು ಬೆಳೆದು ಹೊಡೆದಾಟಕ್ಕಿಳಿದ ಘಟನೆ ನಡೆದಿದೆ. ಗಡಿಗೇನಹಳ್ಳಿ ಗ್ರಾಮದಲ್ಲಿರುವ ದೇವಾಲಯದ ಮುಂಭಾಗದಲ್ಲಿ ರಾತ್ರಿ ಎರಡು ಗುಂಪುಗಳು ಹೊಸ ವರ್ಷದ ಆಚರಣೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ವೇಳೆ ಪಟಾಕಿ ಹಚ್ಚುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಕೈಕೈ ಮೀಲಾಯಿಸಿದೆ. ಈ ವೇಳೆ ವಿಷಯ ತಿಳಿದ ನಂದಗುಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವರಿಗೆ ಬೆಣ್ಣೆ ಅಲಂಕಾರ
ಸೂಲಿಬೆಲೆ: ಹೊಸಕೋಟೆ ತಾ.ನಂದಗುಡಿ ಹೋಬಳಿಯ ಶಿವನಾಪುರ ಗೇಟ್ ಬಳಿ ಇರುವ ಶನಿದೇವರಿಗೆ ಹೊಸ ವರ್ಷದ ಆಚರಣೆ ಅಂಗವಾಗಿ ಬೆಣ್ಣೆ ಅಲಂಕಾರ ಮಾಡಿದ್ದು ಭಕ್ತರ ಗಮನ ಸೆಳೆದಿತ್ತು. ರಾಷ್ಟ್ರೀಯ ಹೆದ್ದಾರಿ -4 ಹೊಸಕೋಟೆ ಚಿಂತಾಮಣಿ ರಸ್ತೆ ಬದಿಯಲ್ಲಿ ಬರುವ ಈ ದೇಗುಲದಲ್ಲಿ ಮಾರುತಿ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಬೆಣ್ಣೆ ಅಲಂಕಾರ ಮಾಡಿದ್ದರು. ಸುತ್ತಮುತ್ತ ಗ್ರಾಮಸ್ಥರು ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

