ಲಾರಿ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು
ರಾಮನಗರ: ಚಲಿಸುತ್ತಿದ್ದ ಬೈಕ್ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಮಧು(13) ಮೃತ ಬಾಲಕನಾಗಿದ್ದು, ಆಕಾಶ್ ಹಾಗೂ ಪ್ರಶಾಂತ್ ಎಂಬುವರು ಗಾಯಗೊಂಡವರು. ಮಂಗಳವಾರ ರಾತ್ರಿ 10ರ ಸಮಯದಲ್ಲಿ 80 ಅಡಿ ರಸ್ತೆಯಲ್ಲಿ ಗುಬ್ಬಲಾಳಕ್ಕೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಟಿಪ್ಪರ್ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ನೆಲಕ್ಕುರುಳಿದ ಮಧು ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಕಾಶ್ನ ಕಾಲು ಮುರಿದಿದ್ದು, ಪ್ರಶಾಂತನಿಗೂ ಕಾಲಿಗೆ ಗಾಯಗಳಾಗಿವೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪಘಾತ: ಅಪರಿಚಿತ ವ್ಯಕ್ತಿ ಸಾವು
ಹೊಸಕೋಟೆ: ತಾಲೂಕಿನ ರಾ.ಹೆ ಹಲಸಹಳ್ಳಿ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾನೆ. ರಸ್ತೆ ದಾಟುವಾಗ ಕೋಲಾರದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಯಾವುದೋ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮೃತ ಸುಮಾರು 35-40 ವರ್ಷದವನಾಗಿದ್ದು ಕೆಂಪು ಮತ್ತು ಗುಲಾಬಿ ಮಿಶ್ರಿತ ಬಣ್ಣದ ಅಂಗಿ, ಕಂದು ಬಣ್ಣದ ಪ್ಯಾಂಟ್ ತೊಟ್ಟಿರುತ್ತಾನೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಹೊಸಕೋಟೆ ಪೊಲೀಸ್ ಠಾಣೆ ದೂ.(080)27931570 ಸಂಪರ್ಕಿಸಬಹುದಾಗಿದೆ.
ವಿಷಸೇವಸಿ ಗೃಹಿಣಿ ಆತ್ಮಹತ್ಯೆ
ಹೊಸಕೋಟೆ: ತಾಲೂಕಿನ ಮಲ್ಲಿಮಾಕನಪುರದಲ್ಲಿ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕಾರ್ಮಿಕಳಾದ ರಾಧಮ್ಮ (26) ಮೃತಳು. ಬಹಳ ದಿನಗಳಿಂದ ಹೊಟ್ಟೆ ನೋವು ಬರುತ್ತಿದ್ದು ವಾಸಿಯಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೀಟನಾಶಕ ಸೇವಿಸಿದಳು. ಸಮೀಪದ ಎಂವಿಜೆ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಸ್ ಡಿಕ್ಕಿ: ವ್ಯಕ್ತಿ ಸಾವು
ನೆಲಮಂಗಲ: ಬೆಂಗಳೂರು-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 48ರ ಯಂಟಗಾನಹಳ್ಳಿ ಬಳಿ ಬಸ್ಸೊಂದು ವ್ಯಕ್ತಿಯೋರ್ವನಿಗೆ ಗುದ್ದಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ಅರೆಬೊಮ್ಮನಹಳ್ಳಿ ವಾಸಿ ಬೈರೇಗೌಡ (28) ಎಂದು ಗುರುತಿಸಲಾಗಿದೆ. ಈತ ಬೆಂಗಳೂರು-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಮ್ಕೋ ದೇವಿಯಲ್ಲಿ ರೋಡ್ ಕಂಪನಿಯ ಟೋಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯದಲ್ಲಿದ್ದಾಗ ಅಪಘಾತ ಸಂಭವಿಸಿದೆ. ಈತ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ವಾಹನಗಳ ಸಂಚಾರ ನಿಯಂತ್ರಿಸುತ್ತಿದ್ದಾಗ ಬಸ್ಸೊಂದು ವೇಗವಾಗಿ ಬಂದು ಹರಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈ ಘಟನೆ ಬಗ್ಗೆ ಬೇಸತ್ತ ಗ್ರಾಮಸ್ಥರು ಪ್ರತಿಭಟಿಸಿದರು. ಈ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರತಿಭಟನಾನಿರತ ಗ್ರಾಮಸ್ಥರ ಮನವೊಲಿಸಿ ನಂತರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
80 ವರ್ಷದ ವೃದ್ಧ ನಾಪತ್ತೆ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಅಮ್ಮನಪುರದೊಡ್ಡಿ ಗ್ರಾಮದ ವಾಸಿ ಮುನಿಯಾನಾಯಕ ಎಂಬ 80 ವರ್ಷದ ವೃದ್ಧ ಡಿ.22ರಿಂದ ಕಾಣೆಯಾಗಿದ್ದಾರೆ. ರಾಮನಗರದ ನ್ಯಾಯಾಲಯಕ್ಕೆ ಹೋಗಿ ಬರುವುದಾಗಿ ಹೋದವರು ಮತ್ತೆ ವಾಪಸಾಗಿಲ್ಲ. ಕೋಲು ಮುಖ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ ಹೊಂದಿರುವ ಈ ವ್ಯಕ್ತಿಯು ಕನ್ನಡ, ಉರ್ದು ಮತ್ತು ಲಂಬಾಣಿ ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

