ಬೆಂಗಳೂರು ಗ್ರಾಮಾಂತರ

ನಮ್ಮ ನಾಡು ನುಡಿಗಾಗಿ ಹೋರಾಡುವ ಸ್ಥಿತಿ ನಿರ್ಮಾಣ

Published On :

ವಿಜಯಪುರ: ನಮ್ಮ ಬಯಲುಸೀಮೆ ಪ್ರದೇಶಕ್ಕೆ ಶಾಶ್ವತ ನೀರಾವರಿ ಅತ್ಯವಶ್ಯಕವಾಗಿದ್ದು ಈ ವಿಚಾರವಾಗಿ ತಮ್ಮ ಶಾಸಕ ಸ್ಥಾನ ಹೋದರೂ ಪರವಾಗಿಲ್ಲ ಹೋರಾಟ ಮಾಡುವುದಾಗಿ ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.
ಅವರು ಪಟ್ಟಣದ ಶಿಢ್ಲಘಟ್ಟ ಕ್ರಾಸ್ ಸರ್.ಎಂ.ವಿಶ್ವೇಶ್ವರಯ್ಯ ಸರ್ಕಲ್‌ನಲ್ಲಿ ಮಯೂರ ಕನ್ನಡ ಗೆಳೆಯರ ಬಳಗದ ವತಿಯಿಂದ ಏರ್ಪಡಿಸಿದ್ದ 17 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮ ನಾಡು ನುಡಿ ಜಲಕ್ಕಾಗಿ ನಾವು ಹೋರಾಡುವ ಸ್ಥಿತಿ ನಿರ್ಮಾಣವಾಗಿರುವುದು ಶೋಚನೀಯ ಎಂದ ಅವರು ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರಿಂದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ನಾಡಪ್ರಭು ಕೆಂಪೇಗೌಡ ಹೆಸರಿಡಲಾಗಿದೆ ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಶಿಢ್ಲಘಟ್ಟ ಕ್ಷೇತ್ರ ಶಾಸಕ ರಾಜಣ್ಣ ಮಾತನಾಡಿ ಶಾಸ್ತ್ರಿಯ ಸ್ಥಾನಮಾನ ಸಿಕ್ಕಿರುವ ನಮ್ಮ ಭಾಷೆಯು ಅತ್ಯಂತ ಸಿರಿವಂತಿಕೆಯಿಂದ ಕೂಡಿದೆ. ನಮ್ಮ ಭಾಷೆಯಲ್ಲಿ ಮಾತನಾಡಲು ಹೆಮ್ಮೆಯಾಗುತ್ತದೆ
ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಜಿ ಪುರಸಭಾ ಸದಸ್ಯ ದೇವರಾಜು ಮಾತನಾಡಿ ಇಂದು ಎಲ್ಲರೂ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದ ಶಿಕ್ಷಣದ ಕಡೆ ಒಲವು ತೋರುತ್ತಿದ್ದಾರೆ. ಆದರೆ ವ್ಯಾಕರಣದೊಂದಿಗೆ ಇರುವ ನಮ್ಮ ಭಾಷೆಯ ಮಹತ್ವ ಮರೆಯುತ್ತಿದ್ದಾರೆ. ಪ್ರತಿ ಮಕ್ಕಳು 5ನೇ ತರಗತಿವರೆಗಾದರೂ ಕನ್ನಡ ಮಾಧ್ಯಮವನ್ನು ಕಲಿಯುವಂತೆ ಕಡ್ಡಾಯವಾಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.