ನೂತನ ವರ್ಷ; ವಿವಿಧೆಡೆ ವಿಶೇಷ ಪೂಜೆ
ಮಾಲೂರು: ನೂತನ ವರ್ಷರಾಂಭದ ಮೊದಲದಿನವನ್ನು ಪಟ್ಟಣದಲ್ಲಿ ಜನತೆ ಸಡಗರದಿಂದ ಬರಮಾಡಿಕೊಂಡರು.
ಪಟ್ಟಣದ ಗ್ರಾಮ ದೇವತೆ ಮಾರಿಕಾಂಬ, ಶಂಕರನಾರಾಯಣಸ್ವಾಮಿ, ಆಂಜನೇಯ ಸ್ವಾಮಿ, ಸುಬ್ರಮಣ್ಯಸ್ವಾಮಿ, ಧರ್ಮರಾಯ ದೇವಾಲಯದಲ್ಲಿ ನೂತನ ವರ್ಷದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗಿನಿಂದಲೇ ಪಟ್ಟಣದ ಹೃದಯ ಭಾಗದಲ್ಲಿರುವ ಮಾರಿಕಾಂಬ ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ದೇವಾಲಯವನ್ನು ಸಂಪೂರ್ಣವಾಗಿ ಹೂವಿನಲ್ಲಿ ಅಲಂಕಾರ ಮಾಡಲಾಗಿತ್ತು. ನೂತನ ವರ್ಷದ ಅಂಗವಾಗಿ ಹತ್ತು ಸಾವಿರಕ್ಕೂ ಹೆಚ್ಚು ಸಿಹಿ ಲಾಡುಗಳನ್ನು ವಿತರಿಸಲಾಯಿತು. ಪೊಲೀಸ್ ಠಾಣೆಯ ಮುಂಭಾಗದ ಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ಮಾಡಿರುವ ವಿಶೇಷ ಅಲಂಕಾರವನ್ನು ವೀಕ್ಷಿಸಲು ಭಕ್ತಾದಿಗಳು ಸಾಲಿನಲ್ಲಿ ನಿಂತು ದರ್ಶನ ಪಡೆದರು. ಧರ್ಮರಾಯ ದೇವಾಲಯದಲ್ಲೂ ವಿಶೇಷ ಅಲಂಕಾರ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

