ಬೆಂಗಳೂರು ಗ್ರಾಮಾಂತರ

ಪೌಷ್ಟಿಕ ಆಹಾರ ಕುರಿತು ಮಹಿಳೆಯರಿಗೆ ಮಾಹಿತಿ

Published On :

ಮಾಗಡಿ: ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಕೇಂದ್ರಗಳನ್ನು ಸ್ಥಾಪಿಸುವುದಿರಂದ ಆರ್ಥಿಕವಾಗಿ ಸಬಲೀಕರಣವಾಗಲು ಸಹಕಾರಿಯಾಗುತ್ತದೆ ಎಂದು ನೇಸರ ನೇಚರ್ಸ್ ಫುಡ್ ಉದ್ಯಮಿ ನಾಗರತ್ನ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ತಂತ್ರಜ್ಞಾನ ಕುರಿತು ಏರ್ಪಡಿಸಿದ್ದ ಆರೋಗ್ಯ ಮತ್ತು ಉದ್ಯಮಶೀಲತೆ ಕುರಿತು ಉಪನ್ಯಾಸ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಅಪರ ಸಂಯೋಜಕಿ ಡಾ.ಲತಾ ಆರ್. ಕಲುಕರ್ಣಿ ಅವರು ಪೌಷ್ಟಿಕ ಆಹಾರದ ಪಾತ್ರ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಕುರಿತು ಮಹಿಳೆಯರಿಗೆ ಮಾಹಿತಿ ನೀಡಿದರು.
ಮಹಿಳೆಯರು ಸ್ವಉದ್ಯೋಗಿಗಳಾಗಲು ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಪಡೆದು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಸಿ ಮಾರಾಟ ಮಾಡಬಹುದು ಎಂದು ತಾಲೂಕು ಸಾಕ್ಷರತಾಧಿಕಾರಿ ರಮೇಶ್ ದೇಶಪಾಂಡೆ ಹಣಕಾಸಿನ ಸೌಲಭ್ಯಗಳ ಬಗ್ಗೆ ವಿವರಿಸಿದರು. ಧಾನ್ ಪೌಂಡೇಶನ್ ವಲಯ ಸಂಯೋಜಕ ಶಂಕರ ಪ್ರಸಾದ್ ಮಾತನಾಡಿ ಮಹಿಳೆಯರು  ಸ್ಥಳೀಯ ಆಹಾರದ ಮೌಲ್ಯವರ್ಧನೆ ಮಾಡಿ ಕೌಟಂಬಿಕ ಆದಾಯ ಹೆಚ್ಚಿಸಿಕೊಳ್ಳಲು ಪ್ರಮುಖ ಪಾತ್ರ ಅತ್ಯಂತ ಅವಶ್ಯಕ ಎಂದರು.
ವಿಜ್ಞಾನಿ ಡಾ. ಎಸ್. ಕಮಲಾಬಾಯಿ, ಯೋಜನಾ ಸಹಾಯಕ ಕೆ.ಎಸ್. ಶ್ಯಾಮಸುಂದರ್, ತರಬೇತಿ ಸಹಾಯಕ ಎಚ್.ಸಿ. ರಂಗನಾಥ್ ಹಾಗೂ 60ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.