ಹಿಂ.ಜಾತಿಗಳ ಒಕ್ಕೂಟದ ದಶಮಾನೋತ್ಸವ, ಜನಜಾಗೃತಿ ಸಮಾವೇಶಕ್ಕೆ ಸಿದ್ಧರಾಗಲು ಕರೆ
ಕ.ಪ್ರ.ವಾರ್ತೆ,ಮಾಗಡಿ,ಜ.1
ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ದಶಮಾನೋತ್ಸವ ಹಾಗೂ ಜನಜಾಗೃತಿ ಕಾರ್ಯಕ್ರಮಕ್ಕೆ ಸಂಘಟಿತರಾಗುವಂತೆ ಬೆಂಗಳೂರು ನಗರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಟಿ.ಎನ್. ನಾರಾಯಣಗೌಡ ಕರೆ ನೀಡಿದರು.
ಅವರು ಮಾಗಡಿ ಪಟ್ಟಣದ ಸಿದ್ಧಾರೂಢಾಶ್ರಮದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟ ಏರ್ಪಡಿಸಿದ್ದ ದಶಮಾನೋತ್ಸವದ ಹಾಗು ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಹಿಂದಳಿದ ಜಾತಿಗಳು ಶೋಷಣೆಗೆ ಒಳಗಾಗಿದ್ದು, ಹಲವಾರು ವರ್ಷಗಳಿಂದ ಶೈಕ್ಷಣಿಕವಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಅನ್ಯಾಯವಾಗಿದೆ. ಸರ್ಕಾರ 2014 ರ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಜಾತಿಗಣತಿ ನಡೆಸಲು ತೀರ್ಮಾನಿಸಿದ್ದು, ಹಿಂದುಳಿದ ಜಾತಿಗಳನ್ನು ಗುರುತಿಸುವುದಕ್ಕೆ ಒಕ್ಕೂಟ ಸರ್ಕಾರವನ್ನು ಒತ್ತಾಯಿಸುತ್ತದೆ. ಜತೆಗೆ ಪ್ರವರ್ಗ-1,2ಎ ಗೆ ಸೇರಿದ ಮೇಲ್ವರ್ಗದ ಸುಮಾರು 65 ಸಾವಿರಕ್ಕೂ ಹೆಚ್ಚು ಮೀಸಲಾತಿಯಡಿ ಸುಳ್ಳು ಪ್ರಮಾಣ ಪತ್ರಗಳನ್ನು ಪಡೆದು ಆ ವರ್ಗಕ್ಕೆ ಕೊಟ್ಟಂತಹ ಮೀಸಲಾತಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ.ಇದನ್ನು ರದ್ದುಗೊಳಿಸಬೇಕು. ವೈಜ್ಞಾನಿಕ ಸಮೀಕ್ಷೆಯಲ್ಲದೆ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಶಿಪಾರಸು ಇಲ್ಲದೆ ಪವರ್ಗ 2ಎ ಗೆ ಸೇರಿಸಿರುವುದನ್ನು ಒಕ್ಕೂಟ ವಿರೋಧಿಸುತ್ತದೆ. ಹಿಂದುಳಿದ ವರ್ಗಗಳ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ನೀಡಬೇಕು.
2013-14ನೇ ಸಾಲಿಗೆ ಹಿಂದುಳಿದ ಜಾತಿಗಳು ನಡೆಸುತ್ತಿರುವ ಉಚಿತ ವಿದ್ಯಾರ್ಥಿ ನಿಲಯಗಳ ನಿರ್ವಹಣಾ ವೆಚ್ಚಕ್ಕಾಗಿ ಸರ್ಕಾರ 5 ಲಕ್ಷ ರು. ಮಂಜೂರಾತಿ ನೀಡಿದೆ. ಇದನ್ನು ಎಲ್ಲಾ ಅನುದಾನ ರಹಿತ ವಿದ್ಯಾರ್ಥಿ ನಿಲಯಗಳಿಗೂ ವಿಸ್ತರಿಸಬೇಕು. ಮಹಿಳೆಯರಿಗೆ ರಾಜಕೀಯವಾಗಿ ಶೇ.33 ರಷ್ಟು ಮೀಸಲಾತಿ ಅದರಲ್ಲೂ ಹಿಂದುಳಿದ ಜಾತಿಗಳ ಮಹಿಳೆಯರಿಗೆ ಒಳಮೀಸಲಾತಿ ನೀಡಬೇಕೆಂದು ಒಕ್ಕೂಟ ಸಂಘಟನಾತ್ಮಕವಾಗಿ ಹೋರಾಟ ಮಾಡಲಿದೆ. ಈ ಎಲ್ಲಾ ಧ್ಯೇಯೋದ್ದೇಶಗಳ ಈಡೇರಿಕೆಗಾಗಿ ಹಾಗೂ ಒಕ್ಕೂಟದ ಸರ್ವತೋಮುಖ ಅಭಿವೃದ್ಧಿಗಾಗಿ ಜಾಗೃತ ಸಮಾವೇಶಕ್ಕೆ ಸಂಘಟಿತರಾಗೋಣ ಎಂದರು. ಜ.12 ರಂದು 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ದಶಮಾನೋತ್ಸವ ಹಾಗೂ ಜಾಗೃತಿ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಮಾಜ ಕಲ್ಯಾಣ ಸಚಿವ ಎಚ್.ಅಂಜನೇಯ ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಚಿಂತಕರು ಪಾಲ್ಗೊಳುವುದರಿಂದ ಹಿಂದುಳಿದ ಎಲ್ಲಾ ಜಾತಿಗಳ ಜನತೆ ಸಕಾಲಕ್ಕೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸುವಂತೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

