ಸುದ್ದಿ ಸಂಕ್ಷೇಪ
ಅರ್ಜಿ ಆಹ್ವಾನ
ರಾಮನಗರ: ಅಲ್ಪಸಂಖ್ಯಾತ ಕ್ರಿಶ್ಚಿಯನ್ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರೆಸಲು ಉತ್ತೇಜನ ನೀಡುವ ಸಲುವಾಗಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಮತ್ತು ಕಲೆ, ವಾಣಿಜ್ಯ ಮತ್ತು ವೃತ್ತಿಪರೇತರ, ಪದವೀಧರ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ರು.3000(ಪಿಯುಸಿ), ರು.4000(ಪದವಿ) ಮತ್ತು ರು.5000 (ಸ್ನಾತಕೋತ್ತರ) ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸದರಿ ಕಚೇರಿಗೆ ಸಲ್ಲಿಸುವುದು. 18 ರಿಂದ 30 ವರ್ಷದೊಳಗಿದ್ದು, ಅರ್ಜಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸಿ ಸಲ್ಲಿಸಬೇಕೆಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಕೆನರಾ ಬ್ಯಾಂಕ್ ಎಟಿಎಂ ಉದ್ಘಾಟನೆ
ಮಾಗಡಿ: ತಾಲೂಕಿನ ಕುದೂರಿನಲ್ಲಿ ಕೆನರಾ ಬ್ಯಾಂಕ್ ಎಟಿಎಂ ಅನ್ನು ರಾಷ್ಟ್ರ ಪ್ರಶಸ್ತಿ ವಿಜೇತೆ ಸಾಲು ಮರದ ತಿಮ್ಮಕ್ಕ ಉದ್ಘಾಟಿಸಿದರು. ಗ್ರಾ. ಪಂ. ಸದಸ್ಯ ರಾಘವೇಂದ್ರ ಮಾತನಾಡಿ ಇತ್ತೀಚೆಗೆ ಕುದೂರಿನಲ್ಲಿ ಕೆನರಾ ಬ್ಯಾಂಕ್ ಆರಂಭಗೊಂಡಿರೂ ಉತ್ತಮ ಸೇವೆ ನೀಡುವ ಮೂಲಕ ಕಡಿಮೆ ಅವಧಿಯಲ್ಲಿ ಗ್ರಾಹಕರ ಮನಗೆದ್ದಿದೆ ಎಂದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶ್ರೀನಿವಾಸ್ ಜಹಗೀರ್ದಾರ್ ಮಾತನಾಡಿ ಎಟಿಎಂ ಅನ್ನು ಹೊಸ ವರ್ಷದ ಉಡುಗೊರೆಯಾಗಿ ಗ್ರಾಹಕರಿಗೆ ಸಮರ್ಪಣೆ ಮಾಡಲಾಗಿದೆ. ದುರ್ಬಳಕೆ ಮಾಡಿಕೊಳ್ಳದೆ ಗ್ರಾಹಕರು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು. ತಾ.ಪಂ. ಮಾಜಿ ಸದಸ್ಯ ಕೆ.ಜಿ. ಉದ್ದೀಶ್, ಗ್ರಾ.ಪಂ. ಸದಸ್ಯ ಶ್ರೀಪತಿ, ಶಿವಾನಂದ್ ಹಾಗೂ ಇತರೆ ಗ್ರಾಹಕರು, ಸಾರ್ವಜನಿಕರು ಭಾಗವಹಿಸಿದ್ದರು.
ಇಂದು ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ
ರಾಮನಗರ: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಣತ್ತಿ ಶಿಕ್ಷಣ ಶಿಕ್ಷಕರ ಸಂಘದಿಂದ ವೃತ್ತಿ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನವು ಜ.3ರ ಬೆಳಗ್ಗೆ 8ಕ್ಕೆ ನಗರದ ಗುರುಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕ ನರಸಿಂಹ ರೆಡ್ಡಿ ಉದ್ಘಾಟಿಸುವರು. ಡಿಡಿಪಿಐ ಪ್ರಹ್ಲಾದಗೌಡ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಪ್ರಕಾಶ್, ಭೀಮಾನಾಯಕ್, ಶಶಿಧರ್, ಎಂ.ಆರ್.ಮುನಿಯಪ್ಪ, ಜಯರಾಮು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

