ಹಿಂದೂ ಸಂಘಟನೆ ವಿರುದ್ಧ ಸುಳ್ಳು ಕೇಸ್
ದೊಡ್ಡಬಳ್ಳಾಪುರ: ಹಿಂದೂ ಜಾಗರಣಾ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಅಜೇಕಾರ್ ಅವರನ್ನು ತುಮಕೂರು ಜಿಲ್ಲಾಡಳಿತ ಗೂಂಡಾ ಕಾಯ್ದೆಯಡಿ ಬಂಧಿಸಿರುವುದನ್ನು ಖಂಡಿಸಿ ಬೆಂ.ಗ್ರಾ.ಜಿಲ್ಲಾ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಲ್ಲಿನ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶಿರಾದಲ್ಲಿ ಹಿಂದೂಪರ ಸಂಘಟನೆಗಳ ಮೇಲೆ ಉದ್ದೇಶಪೂರ್ವಕವಾಗಿ ದಬ್ಬಾಳಿಕೆ ನಡೆಯುತ್ತಿದೆ. ನ್ಯಾಯ ಕೇಳಿದರೆ ಗೂಂಡಾ ಕಾಯ್ದೆಯಡಿ ಬಂಧಿಸುವ ಆಡಳಿತಕ್ಕೆ ಧಿಕ್ಕಾರವಿರಲಿ. ಈ ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಂಧಿತ ಅಜೇಕಾರ್ ಅವರನ್ನು ಬೇಷರತ್ ಬಿಡುಗಡೆ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ಬೆಂ.ಗ್ರಾ.ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಅಮರನಾಥ್, ನಮೋ ಬ್ರಿಗೇಡ್ ತಾಲೂಕು ಸಂಚಾಲಕ ಮುರಳಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾಶಿವಶಂಕರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವತ್ಸಲ, ಜಿಲ್ಲಾ ಮುಖಂಡ ಗೋಪಿ, ಹಿಂಜಾವೇ ಕಾರ್ಯವಾಹಕ ರಘುನಾಥ್, ನಗರ ಸಂಚಾಲಕ ಅಮರ್, ಕಾರ್ಯಕರ್ತರಾದ ಮಂಜುನಾಥ್, ದೀಪು, ಕೀರ್ತಿ, ಮಹೇಶ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

