ಅಸಭ್ಯ ವರ್ತನೆ: ಯುವಕನಿಗೆ ಧರ್ಮದೇಟು, ಸೆರೆ
ರಾಮನಗರ: ತನ್ನ ಅಸಭ್ಯ ವರ್ತನೆ ಪ್ರಶ್ನಿಸಿದ್ದಕ್ಕಾಗಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಯುವಕನನ್ನು ಸಾರ್ವಜನಿಕರು ಥಳಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಗರದ ಛತ್ರದ ಬೀದಿಯಲ್ಲಿ ಶುಕ್ರವಾರ ಸಂಭವಿಸಿದೆ. ನಗರದ ಕೆಂಪೇಗೌಡ ವೃತ್ತ ಬಳಿಯ ಬಡಾವಣೆ ನಿವಾಸಿ ಸಚಿನ್(20) ಆರೋಪಿ. ಛತ್ರದ ಬೀದಿಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬೈಕಿನಲ್ಲಿ ಬಂದ ಸಚಿನ್ ಜೋರಾಗಿ ಹಾರ್ನ್ ಮಾಡುತ್ತಿದ್ದನು. ಹಿಂತಿರುಗಿ ನೋಡಿದ ವಿದ್ಯಾರ್ಥಿನಿ ಆಕ್ಷೇಪಿಸಿ ಬೈದಳೆನ್ನಲಾಗಿದೆ. ಇದರಿಂದ ಕೆರಳಿದ ಸಚಿನ್ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದನು. ಅಷ್ಟರಲ್ಲಿ ಸುತ್ತಮುತ್ತಲ ನಿವಾಸಿಗಳು, ದಾರಿ ಹೋಕರು ಸ್ಥಳಕ್ಕೆ ಆಗಮಿಸಿದರು. ವಿಷಯ ತಿಳಿದು ಯುವಕನಿಗೆ ಗೂಸಾ ಕೊಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸಚಿನ್ ಪರಾರಿಯಾಗಲು ವಿಫಲಯತ್ನ ನಡೆಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪೊಲೀಸರು ಸಚಿನ್ನನ್ನು ವಶಕ್ಕೆ ಪಡೆದುಕೊಂಡರು. ವಿದ್ಯಾರ್ಥಿನಿ ಮತ್ತವರ ಪೋಷಕರು ನೀಡಿದ ದೂರಿನ ಮೇರೆಗೆ ಸಚಿನ್ ವಿರುದ್ಧ ದೂರು ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ನ.17ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

