ಮಡಿವಾಳ ಸಮುದಾಯ ಪರಿಶಿಷ್ಟ ಜಾತಿಗೆ ಸೇರಿಸಲು ಡಿಸಿಗೆ ಆಗ್ರಹ
ರಾಮನಗರ: ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಹಾಗೂ ಕುಲಗುರು ಮಡಿವಾಳ ಮಾಚಿದೇವರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಡಿವಾಳ ಸಂಘದ ಜಿಲ್ಲಾ ಘಟಕದ ನಿಯೋಗ ಅಪರ ಜಿಲ್ಲಾಧಿಕಾರಿ ಬಸವರಾಜು ಅವರಿಗೆ ಮನವಿ ಸಲ್ಲಿಸಿದೆ.
ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಸಂಘದ ಜಿಲ್ಲಾಧ್ಯಕ್ಷ ಟಿ.ರಂಗಸ್ವಾಮಿ ಮಾತನಾಡಿ, ಮಡಿವಾಳ ಜನಾಂಗ ಆರ್ಥಿಕ, ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಸರ್ಕಾರದ ಯಾವುದೇ ಸವಲತ್ತುಗಳು ಈ ಜನಾಂಗಕ್ಕೆ ತಲುಪುತ್ತಿಲ್ಲ. ದೇಶದ 17 ರಾಜ್ಯಗಳಲ್ಲಿ ಮಡಿವಾಳ ಜನಾಂಗವನ್ನು ಈಗಾಗಲೇ ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ರಾಜ್ಯದಲ್ಲಿರುವ ಜನಾಂಗದವರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂದರು.
ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ, ಮಡಿವಾಳರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ನಾಳೆ ಸಮಾವೇಶ: ಜ.5ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಮಡಿವಾಳ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಮಡಿವಾಳ ಜನಾಂಗದ ಸ್ವಾಮೀಜಿ ಮಾಚಿದೇವ ಶಿವಯೋಗಾನಂದಪುರಿ, ಬಸವಮಾಚಿದೇವ ಹಾಗೂ ಮುಕ್ತಾನಂದ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು, ಕುಲಗುರು ಮಡಿವಾಳ ಮಾಚಿದೇವರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವಂತೆ ಹಾಗೂ ಜನಾಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ನಿಯೋಗದಲ್ಲಿ ರಾಜ್ಯ ಮಡಿವಾಳ ಸಂಘದ ಸಂಚಾಲಕ ಬಿ.ವೆಂಕಟರಾಮಯ್ಯ, ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಕೆ.ನಿಂಗರಾಜು, ಜಯದೇವ, ಲಕ್ಷ್ಮಿದೇವಮ್ಮ, ಎಸ್.ಕುಮಾರ್, ಗವಿಸಿದ್ದಯ್ಯ, ರಂಗಪ್ಪ, ರಾಜು, ನರಸಿಂಹಯ್ಯ, ಎನ್.ಮಹೇಶ್, ಉಷಾದೇವಿ, ಗಂಗಹನುಮಯ್ಯ, ಅಶೋಕ್ಕುಮಾರ್, ಶಿವು ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

