ಬೆಂಗಳೂರು ಗ್ರಾಮಾಂತರ

ಅನೈತಿಕ ಸಂಬಂಧ ಪ್ರಶ್ನಿಸಿದ ಯುವಕನ ಕೊಂದ ಪ್ರೇಯಸಿ

Published On :

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಹೊರವಲಯದ ಜಿಂಕೆ ಬಚ್ಚಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಜ.1ರಂದು ನಡೆದಿದ್ದ  ಆತ್ಮಹತ್ಯೆ ಪ್ರಕರಣ ಅನಿರೀಕ್ಷಿತ ತಿರುವು ಪಡೆದಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಈ ಸಂಬಂಧ ಮಲ್ಲಮ್ಮ ಮತ್ತು ಸಾರಥಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಜಿಂಕೆಬಚ್ಚಹಳ್ಳಿಯ ನೀಲಗಿರಿ ತೋಪಿನಲ್ಲಿ ಗ್ರಾಮದ ನಿವಾಸಿ ನಾಗೇಶ್(28) ಸಾವನ್ನಪ್ಪಿದ್ದ.  ನಾಗೇಶ್ ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ. ಇವರಿಬ್ಬರೂ ಸೋದರ ಸಂಬಂಧಿಗಳು. ಇವರ ಮನೆಯಲ್ಲಿ ಮದುವೆ ಮಾಡುವ ಸಿದ್ಧತೆಗಳೂ ನಡೆದಿದ್ದವು ಎನ್ನಲಾಗಿದೆ. ಆದರೆ ಅದೇ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾರಥಿ ಎಂಬಾತನೊಂದಿಗೆ ಮಲ್ಲಮ್ಮನಿಗೆ ಅನೈತಿಕ ಸಂಬಂಧ ಇದೆ ಎಂಬುದು ನಾಗೇಶನಿಗೆ ತಿಳಿದಿದೆ. ವಿವಾಹಿತನಾಗಿದ್ದ ಸಾರಥಿ ಮನೆ ಮುಂದೆ ಆತ ಹೋಗಿ ಜಗಳ ಮಾಡಿದ್ದ. ಪರಿಣಾಮ ಸಾರಥಿಯ ಹೆಂಡತಿ ಆತನನ್ನು ತೊರೆದಿದ್ದಳು. ನಂತರ ಮಲ್ಲಮ್ಮ ಮತ್ತು ನಾಗೇಶನ ನಡುವೆ ಸಂಧಾನಕ್ಕೆ ಜಿಂಕೆಬಚ್ಚಹಳ್ಳಿಯ ನೀಲಗಿರಿ ತೋಪಿನಲ್ಲಿ ಮೂವರೂ ಸೇರಿದ್ದಾರೆ. ಆದರೆ ಮದುವೆಗೆ ಒಪ್ಪದ ನಾಗೇಶನನ್ನು ಮಲ್ಲಮ್ಮ ತನ್ನ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.