ಕಾರ್ಯರೂಪಕ್ಕೆ ಬಾರದ ಮಹಿಳಾ ಸಬಲೀಕರಣ ಆಶಯ: ಸುಭದ್ರ
ದೊಡ್ಡಬಳ್ಳಾಪುರ: ಇಲ್ಲಿನ ಪಟ್ಟಣ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಹೆಣ್ಣು ಮಕ್ಕಳು ಮತ್ತು ಶಿಕ್ಷಣ ಅರಿವು ಕಾರ್ಯಕ್ರಮ ಸಮಾಜಕಲ್ಯಾಣ ಇಲಾಖೆಯ ಸರ್ಕಾರಿ ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆಯಿತು.
ಸಂಪರ್ಕ ಇಲಾಖೆ ನಿವೃತ್ತ ಅಧಿಕಾರಿ ಎಸ್.ಎನ್.ಸುಭದ್ರ ಮಾತನಾಡಿ, ಮಹಿಳೆ ಕುರಿತ ಆಲೋಚನೆಗಳು ಮತ್ತು ಚಿಂತನೆಗಳು ಕೇವಲ ಭಾಷಣಗಳಲ್ಲಿ ಜೀವಂತವಾಗಿವೆಯೇ ಹೊರತು ಕಾರ್ಯರೂಪಕ್ಕೆ ಪರಿಪೂರ್ಣವಾಗಿ ಬಂದಿಲ್ಲ. ಮಹಿಳಾ ಸಾಕ್ಷರತೆ, ಸಬಲೀಕರಣದ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದ್ದರೂ ಅವುಗಳನ್ನು ಕಾರ್ಯರೂಪಕ್ಕೆ ತರುವುದು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸಾಧ್ಯವಾಗಿಲ್ಲ ಎಂದರು.
ಮಹಿಳಾ ಮೀಸಲಾತಿ ಇಂದು ಅನೇಕ ಹಂತಗಳಲ್ಲಿ ದುರ್ಬಳಕೆಯಾಗುತ್ತಿದೆ. ಮಹಿಳೆಯರ ಹೆಸರಿನಲ್ಲಿ ಪುರುಷಶಾಹಿ ತನ್ನ ಪ್ರಭುತ್ವ ಮೆರೆಯುತ್ತಿದೆ. ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಅನೇಕ ಕಾನೂನುಗಳು ರೂಪಿತವಾಗಿವೆ. ಸೌಲಭ್ಯಗಳಿವೆ. ಮೀಸಲಾತಿ ಇದೆ. ಆದರೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಹೆಣ್ಣನ್ನು ಪೂಜನೀಯ ಎಂದು ಬಾಯಿ ಮಾತಿಗೆ ಹೇಳಿದರೆ ಸಾಲದು. ಆಕೆಯ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆಯನ್ನು ತಡೆಯುವ ನಿಟ್ಟಿನಲ್ಲಿ ಸಮಾಜ ಮುಂದಾಗಬೇಕು ಎಂದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹನುಮಂತರಾಯಪ್ಪ ಮಾತನಾಡಿ, ಇಲಾಖೆ ವ್ಯಾಪ್ತಿಯಲ್ಲಿರುವ ಅನೇಕ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಶಿಕ್ಷಣ, ಆರೋಗ್ಯ, ಆಹಾರ ಮತ್ತು ರಚನಾತ್ಮಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸಲಾಗುತ್ತಿದೆ. ಈಗ ಸರ್ಕಾರದಿಂದ ಬಿ ಮಾನ್ಯತೆ ಪಡೆದಿರುವ ವಿದ್ಯಾರ್ಥಿ ನಿಲಯಗಳನ್ನು ಮುಂಬರುವ ದಿನಗಳಲ್ಲಿ ಎ ಮಾನ್ಯತೆಗೆ ತರಲು ಶ್ರಮಿಸುವ ಉದ್ದೇಶವಿದೆ ಎಂದರು.
ನಗರಸಭಾ ಸದಸ್ಯ ವಿ.ಎಸ್.ರವಿಕುಮಾರ್ ಮಾತನಾಡಿ ಸರ್ಕಾರಿ ಹೆಣ್ಣುಮಕ್ಕಳ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ದೊಡ್ಡಬಳ್ಳಾಪುರದಲ್ಲಿ ಸ್ಥಾಪನೆಯಾಗಬೇಕು ಎಂದರು.
ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿಯ ಸಂಚಾಲಕರಾದ ನಟರಾಜ್, ಲಕ್ಷ್ಮೀ ಸೇರಿದಂತೆ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

