ಬೆಂಗಳೂರು ಗ್ರಾಮಾಂತರ

ಪತ್ರಕರ್ತ ಸಿ.ಎ.ಶಾಂತಕುಮಾರ್ ಹೃದಯಾಘಾತದಿಂದ ನಿಧನ

Published On :

ಕ.ಪ್ರ.ವಾರ್ತೆ  ರಾಮನಗರ  ಜ.5
ಪತ್ರಕರ್ತ, ಶಿಕ್ಷಕ, ಕಲಾವಿದ, ಗಾಯಕ ಸಿ.ಎ.ಶಾಂತಕುಮಾರ್ (47) ಹೃದಯಾಘಾತದಿಂದ ಭಾನುವಾರ ನಿಧನರಾದರು.
ಅವರಿಗೆ ತಾಯಿ ಸರೋಜಮ್ಮ, ಪತ್ನಿ ಕಲಾವತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮವಾದ ಚನ್ನೇನಹಳ್ಳಿ ಸೋಮವಾರ ಬೆ.11ಕ್ಕೆ ನಡೆಯಲಿದೆ.  ಸಿ.ಎ.ಶಾಂತಕುಮಾರ್ ಅವರು ಬಹುಮುಖ ವ್ಯಕ್ತಿತ್ವ ಹೊಂದಿದ್ದವರಾಗಿದ್ದರು. ಕಳೆದ 20 ವರ್ಷಗಳಿಂದ ವಿವಿಧ ಪತ್ರಿಕೆಗಳ ವರದಿಗಾರರಾಗಿ, ಏಜೆಂಟರಾಗಿ ಸೇವೆಸಲ್ಲಿಸಿದ್ದರು. ಗಾಯಕರಾಗಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತಮ ಸಂಘಟಕರೆಂದು ಹೆಸರು ಪಡೆದಿದ್ದರು.
ಚನ್ನಪಟ್ಟಣದ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಸೇವೆಯನ್ನು ಪರಿಗಣಿಸಿ ಹಲವಾರು ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದ್ದವು.
ಸಂತಾಪ:  ಸಿ.ಎ.ಶಾಂತಕುಮಾರ್ ಅವರ ನಿಧನಕ್ಕೆ ಕಸಪಾ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್, ತಾಲೂಕು ಅಧ್ಯಕ್ಷ ಸಿದ್ದಲಿಂಗೇಗೌಡ, ಕರವೇ ಜಿಲ್ಲಾಧ್ಯಕ್ಷ ಬಿ.ಶ್ರೀಧರ್ ಹೊಸೂರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎಚ್.ಪ್ರಕಾಶ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಿದೇವರು, ಮಾಜಿ ಶಾಸಕ ಕೆ.ರಾಜು ಸೇರಿದಂತೆ ಹಲವಾರು ಮುಖಂಡರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.