ಬೆಂಗಳೂರು ಗ್ರಾಮಾಂತರ

ಮಹಿಳೆಯರ ಸೃಜನಶೀಲ ಪ್ರತಿಭೆಯ ಅನಾವರಣ

Published On :

ದೊಡ್ಡಬಳ್ಳಾಪುರ: ಇಲ್ಲಿನ ಅಯೋಧ್ಯಾನಗರ ಶಿವಾಚಾರ ವೈಶ್ಯ ನಗರ್ತ ಮಹಿಳಾ ಅಭಿವೃದ್ಧಿ ಸಂಘದ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.
ನಗರ್ತ ಸಂಘದ ಅಧ್ಯಕ್ಷ ಟಿ.ಎಸ್. ದಯಾಶಂಕರ್ ಉದ್ಘಾಟಿಸಿದರು. ಅವರು ಮಾತನಾಡಿ ಮಹಿಳೆಯರು ಎಲ್ಲ ಸ್ತರಗಳಲ್ಲಿ ತಮ್ಮದೇ ಆದ ಸ್ವಂತಿಕೆ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಬದಲಾಗುತ್ತಿರುವ ಸಮಾಜಕ್ಕೆ ಪೂರಕವಾಗಿ ನಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ನಗರ್ತ ಮಹಿಳಾ ಸಂಘ ಗಣನೀಯವಾಗಿ ಬೆಳೆಯುತ್ತಿದೆ. ಸಾಮಾಜಿಕ ಕೆಲಸಗಳತ್ತಲೂ ಗಮನ ಹರಿಸಲಿ. ಸಾಂಸ್ಕೃತಿಕ ಚಿಂತನೆ ಇರಲಿ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ದೀಪಕ್ ಮತ್ತು ಡಾ.ತೇಜಸ್ವಿನಿ ಮಾತನಾಡಿ, ಮಹಿಳಾ ಸಂಘಟನೆಗಳು ಸೃಜನಶೀಲವಾಗಿ ಎಲ್ಲರಿಗೂ ಉಪಯೋಗವಾಗುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಗಣನೀಯ.
ಮಹಿಳೆಯರು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕಾದರೆ ಈ ಬಗೆಯ ಚಿಂತನೆ ಮುಖ್ಯ. ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಬೆಳೆಯುವ ಉದ್ದೇಶ ಸ್ವಾಗತಾರ್ಹ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಗಾಯತ್ರಿ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಗರ್ತ ಸಂಘದ ಕಾರ್ಯದರ್ಶಿ ಬಿ.ವಿ.ಬಸವರಾಜು, ನಿರ್ದೇಶಕ ಶಿವಾನಂದ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಸ್.ನಟರಾಜ್, ಮಾಜಿ ನಗರಸಭಾ ಸದಸ್ಯ ಎಸ್.ಪ್ರಕಾಶ್, ಪಿ.ಸಿ.ಮಂಜುನಾಥ್, ಎಚ್.ವಿ.ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ: ಇದೇ ಸಂದರ್ಭದಲ್ಲಿ ಎಂಟೆಕ್ ಪದವಿಯಲ್ಲಿ ಚಿನ್ನದ ಪದಕ ಪಡೆದ ಎಂ. ವಿಸ್ಮಿತರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ಜನಾಂಗದ ವಿದ್ಯಾರ್ಥಿ - ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ: ಕಾರ್ಯಕ್ರಮದ ಅಂಗವಾಗಿ 3 ವರ್ಷದಿಂದ 10 ವರ್ಷದೊಳಗಿನ ಮಕ್ಕಳಿಂದ ಛದ್ಮವೇಷ ಪ್ರದರ್ಶನ ಮತ್ತು ಸಂಘದ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಂಘದ ಉಪಾಧ್ಯಕ್ಷೆ ಉಷಾ ಬಸವರಾಜು, ಕಾರ್ಯದರ್ಶಿ ಗೀತಾ ಗೌತಮ್, ಸಹ ಕಾರ್ಯದರ್ಶಿ ಮಂಜುಳಾ ಸತೀಶ್, ಖಜಾಂಚಿ ಭ್ರಮರಾ ಶಿವು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.