ಉದ್ಯೋಗಾವಕಾಶಕ್ಕೆ ಆಂಗ್ಲ ಭಾಷೆ ಜ್ಞಾನ ಅಗತ್ಯ
ಹೊಸಕೋಟೆ :ಇಂದು ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುರಾಷ್ಟ್ರೀಯ ಸಂಸ್ಥೆಗಳು ಹೆಚ್ಚಾಗಿ ಸ್ಥಾಪನೆಯಾಗುತ್ತಿದ್ದು ಉದ್ಯೋಗವಕಾಶ ಪಡೆಯಲು ಆಂಗ್ಲ ಭಾಷೆ ಜ್ಞಾನ ಅಗತ್ಯವಾಗಿದೆ ಎಂದು ಶಾಸಕ ಎನ್.ನಾಗರಾಜ್ ಹೇಳಿದರು.
ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾನ ಅವಕಾಶ ಪಡೆಯಲು ಇಂದು ನಗರದವರೊಂದಿಗೆ ಸಮಾನವಾಗಿ ಸ್ಪರ್ಧಿಸಬೇಕಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆ ಕಠಿಣವಾಗಿರುವ ಕಾರಣ ತಜ್ಞರಿಂದ ಇಂಗ್ಲಿಷ್ ಕಲಿಕೆಗೆ ವಿಶೇಷ ಬೋಧನಾ ತರಗತಿಗಳನ್ನು ಏರ್ಪಡಿಸಲಾಗುವುದು. ಸರಕಾರ ಸಹ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವುದರೊಂದಿಗೆ ಅಗತ್ಯ ಸೌಲಭ್ಯಗಳನ್ನು ಸಹ ಕಲ್ಪಿಸಿ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು ನೀಡುತ್ತಿದೆ.ಪೋಷಕರು ಮಕ್ಕಳ ಹಾಜರು, ಶೈಕ್ಷಣಿಕ ಪ್ರಗತಿಯ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಶಿಕ್ಷಕರೊಂದಿಗೆ ಸಹಕರಿಸಿದಲ್ಲಿ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಸರಕಾರಿ ಶಾಲೆಗಳನ್ನು ಹೆಚ್ಚಿನ ಬಡಜನರೆ ಅವಲಂಬಿಸಿದ್ದು, ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾಮಟ್ಟ ಸುಧಾರಣೆಗೆ ಶ್ರಮಿಸಬೇಕು. ಎಸ್ಎಸ್ಎಲ್ಸಿ ಪರೇಕ್ಷೆಯಲ್ಲಿ ಶಾಲೆ ಉತ್ತಮ ಫಲಿತಾಂಶ ಪಡೆಯಲು ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದರು. ಮುಖ್ಯ ಶಿಕ್ಷಕಿ ಶಾಂತಕುಮಾರಿ ಮಾತನಾಡಿ, ಶಾಲೆಯಲ್ಲಿ ಪ್ರಸ್ತುತ 648
ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದು, 226 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಬಹುತೇಕ ಪಠ್ಯಕ್ರಮಗಳು ಮುಕ್ತಾಯಗೊಂಡಿದ್ದು, ಪುನರಾವರ್ತನೆ ಮತ್ತು ವಿಶೇಷ ಬೋಧನಾ ತರಗತಿಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತಿದೆ. 8ನೇ ತರಗತಿಯಲ್ಲಿ 185 ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ
ಎನ್. ಕೃಷ್ಣಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಚ್.ವಿ. ರಾಮಚಂದ್ರ, ಜೆ.ಕೃಷ್ಣಮೂರ್ತಿ, ಪುರಸಭೆ ಸದಸ್ಯ ಡಿ.ಕೆ.ನಾಗರಾಜ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

