ಬೆಂಗಳೂರು ಗ್ರಾಮಾಂತರ

ಸ್ಥಳದಲ್ಲೇ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ: ಶಾಸಕ ಎಚ್.ಸಿ.ಬಾಲಕೃಷ್ಣ

Published On :

ಮಾಗಡಿ: ಗ್ರಾಮಾಭಿವೃದ್ಧಿಯೇ ನನ್ನ ಧ್ಯೇಯವಾಗಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರನ ಸಮಸ್ಯೆ ಇನ್ನಿತರೆ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಉದ್ದೇಶದಿಂದಲೇ ಗ್ರಾಮ ಸಂಚಾರ ಹಮ್ಮಿಕೊಂಡಿದ್ದೇನೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ಅವರು ಹಂಚೀಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಸಂಚಾರ ನಡೆಸಿ ಮಾತನಾಡಿದರು.
ಇದೇ ವೇಳೆ ಹಂಚೀಕುಪ್ಪೆ ಗ್ರಾ.ಪಂ ವ್ಯಾಪ್ತಿಯ ಮಾರಗೌಡನದೊಡ್ಡಿ, ರಾಮಕಲ್‌ಪಾಳ್ಯ, ಕಾಳಯ್ಯನಪಾಳ್ಯ, ವೀರೇಗೌಡನದೊಡ್ಡಿ, ನಾಯಕನಪಾಳ್ಯ ಜೋಡಗಟ್ಟೆ, ಕೆ.ವಿ. ಮಠ, ಸಾವನದುರ್ಗ, ಉಕ್ಕಡ, ಕರಲಮಂಗಲ, ಕಿಲೇದಾರನಪಾಳ್ಯ, ಕರಿಯಣ್ಣನಪಾಳ್ಯ, ಗುಡ್ಡಹಳ್ಳಿ, ಹೊನ್ನಾಪುರ, ರಂಗನಾಥಪುರ, ಕೆ.ವಿ. ತಾಂಡ್ಯ ಇತರೆಡೆ ಗ್ರಾಮ ಸಂಚಾರ ನಡೆಸಿ, ಸಮಸ್ಯೆಗಳನ್ನು ಖದ್ದು ಆಲಿಸಿದ್ದೇನೆ. ಬಹುತೇಕ  ಮಂದಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದರು. ಅರ್ಜಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾಗಿ ವಿವರಿಸಿದರು. ವಿ.ಜಿ.ದೊಡ್ಡಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ವೈದ್ಯರೊಂದಿಗೆ ಸ್ಪಂದಿಸುತ್ತಿಲ್ಲ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗಿ ಈ ಸಂಬಂಧ ಡಿಎಚ್‌ಓ ಅವರಲ್ಲಿ ತನಿಖೆಗೆ ಸೂಚಿಸಿದ್ದಾಗಿ ತಿಳಿಸಿದರು.  ತಾ.ಪಂ. ಅಧ್ಯಕ್ಷ ಜಿ. ಕೃಷ್ಣ, ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಜಿ.ಪಂ. ಸದಸ್ಯ ವಿಜಯಕುಮಾರ್, ಹಂಚೀಕುಪ್ಪೆ ಗ್ರಾ.ಪಂ. ಅಧ್ಯಕ್ಷೆ ಜಲಜಾ ಬಸವರಾಜು, ಮಂಚನಬೆಲೆ ಲೋಕೇಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.