12ರಂದು ಹಿಂದುಳಿದ ಜಾತಿಗಳ ಒಕ್ಕೂಟದ ಬೃಹತ್ ಸಮಾವೇಶ
ರಾಮನಗರ: ಹಿಂದುಳಿದ ಜಾತಿಗಳ ಒಕ್ಕೂಟದ ಬೃಹತ್ ಸಮಾವೇಶ ಹಾಗೂ ಒಕ್ಕೂಟದ ದಶಮಾನೋತ್ಸವ ಸಮಾರಂಭವು ಬೆಂಗಳೂರಿನಲ್ಲಿ ಜ.12ರಂದು ನಡೆಯಲಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಬೀರಯ್ಯ ತಿಳಿಸಿದರು.
ಸಮಾವೇಶದಲ್ಲಿ ಹಿಂದುಳಿದ ಜನಾಂಗದ ಅಭಿವೃದ್ಧಿಗೆ ಹಲವು ಹಕ್ಕೊತ್ತಾಯಗಳನ್ನು ಮಂಡಿಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.
ದೇವರಾಜ ಅರಸು ಅವರು ಹಿಂದುಳಿದ ವರ್ಗದ ಜನರಿಗೆ ಮೀಸಲಾಗಿ ಕಲ್ಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಕೆಲಸ ಮಾಡಿದ್ದರು. ಅವರ ನಂತರ ಇದೀಗ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಳಾಗಿರುವುದು ಹಿಂದುಳಿದ ವರ್ಗದ ಜನರ ಶ್ರೇಯೋಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಲಿಂಗವಂತ ಹೆಸರಿನ ಸುಮಾರು 18 ಉಪ ಜಾತಿಗಳು ತಮ್ಮ ನೈಜ ಜಾತಿಯನ್ನು ತಿರುಚಿ 2ಎ ಮೀಸಲಾತಿಯನ್ನು ಪಡೆದುಕೊಂಡು ರಾಜಕೀಯ ಸ್ಥಾನ ಸೇರಿದಂತೆ ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಇದರಿಂದ ಅರ್ಹರಿಗೆ ವಂಚನೆಯಾಗಿದ್ದು ಇದರ ಬಗ್ಗೆ ಸಮಗ್ರ ತಿದ್ದುಪಡಿ ತರಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಖಜಾಂಚಿ ಬಿ.ಅಶೋಕ್ ಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮುದಾಯ ಭವನ ಸೇರಿದಂತೆ ಇತರೆ ಅಭಿವೃದ್ಧಿಗೆ ಸರ್ಕಾರ ಕಳೆದ ಸಾಲಿನ ಬಜೆಟ್ನಲ್ಲಿ ರು.75 ಕೋಟಿ ಬಿಡುಗಡೆಗೊಳಿಸಿದ್ದು, 2014ರ ಬಜೆಟ್ನಲ್ಲಿ ರು.200 ಕೋಟಿ ನೀಡಬೇಕೆಂದು ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಕಾರ್ಯಾಧ್ಯಕ್ಷ ಜಿ. ಗುರುವೇಗೌಡ, ಪ್ರಧಾನ ಕಾರ್ಯದರ್ಶಿ ಟಿ.ವಿ.ನಾರಾಯಣ್, ಕಾರ್ಯದರ್ಶಿಗಳಾದ ಆರ್.ಕೆ.ಮೋಹನ್ಕುಮಾರ್, ಎಸ್.ಎನ್. ವೆಂಕಟೇಶಯ್ಯ, ಜಿ.ನಾಗರಾಜು, ತಾಲೂಕು ಘಟಕದ ಅಧ್ಯಕ್ಷ ಎಚ್. ಸುರೇಶ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

