ಬೆಂಗಳೂರು ಗ್ರಾಮಾಂತರ

'ಅಶ್ವಮೇಧ ಕುದುರೆ ಬಿಟ್ಟಿದ್ದರೆ ತಡೆಯಬಹುದಿತ್ತು'

Published On :

ಮಾಗಡಿ: ಕೆಪಿಸಿಸಿ ಸದಸ್ಯ ಎ.ಮಂಜು ಅಶ್ವಮೇಧ ಕುದುರೆ ಬಿಟ್ಟಿದ್ದರೆ ತಡೆಯಬಹುದಿತ್ತು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ತಿರುಗೇಟು ನೀಡಿದರು.  ಅವರು ಹಂಚೀಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಸಂಚಾರ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆ ಮಂಜು ಅವರ ಹೇಳಿಕೆಗೆ ತಿರುಗೇಟು ನೀಡಿದರು.
 ಪಟ್ಟಣದಲ್ಲಿ ನಡೆಯುತ್ತಿರುವ  ಶುದ್ಧ ಕುಡಿಯುವ ನೀರಿನ ಘಟಕ ಯಾವ ಅನುದಾನ ಬಳಸಿ ನಿರ್ಮಿಸಲಾಗುತ್ತಿದೆ. ಕೊಳವೆಬಾವಿ ಕೊರೆಸಿಲ್ಲ, ಸಂಪು ನಿರ್ಮಿಸದೆ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಸಾಧಕ ಬಾಧಕಗಳನ್ನು ಪರಿಶೀಲಿಸಿ, ಶಾಶ್ವತವಾದ ಯೋಜನೆ ಇದಾಗಲಿ. ಈ ಬಗ್ಗೆ ಸಾರ್ವಜನಿಕ ಚರ್ಚೆಯಾಗಲಿ ಎಂದಿದ್ದೆ. ಸಾರ್ವಜನಿಕ ಅನುಕೂಲಕರ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ನನ್ನ ವಿರೋಧವಿಲ್ಲ. ನಾನು ಉತ್ತಮ ಕೆಲಸವನ್ನು ಸ್ವಾಗತಿಸುತ್ತೇನೆ ಹೊರತೂ ತಡೆಯುವ ಶಾಸಕನಲ್ಲ. ಸಂಸದರ ನಿಧಿಯಿಂದಾದರೆ ಹಣ ನೀಡಲಿ ನಾವೇ ನಿರ್ಮಿಸುತ್ತೇವೆ ಎಂದರಲ್ಲದೆ ಶಾಸಕರ ನಿಧಿಯಿಂದ ಪಟ್ಟಣದ ನ್ಯಾಯಾಲಯದ ರಸ್ತೆ ಹಾಗೂ ಕಲ್ಯಗೇಟ್ ವೃತ್ತದ ಬಳಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ಚಿಂತಿಸಲಾಗಿದೆ. ಪಟ್ಪಣದಲ್ಲಿ ಈಗಾಗಲೇ ನೀರಿನ ಸಮಸ್ಯೆ ಉಂಟಾಗಿದ್ದು, ಪುರನಾಗರಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು. ತಾಲೂಕಿಗೆ ಹೇಮಾವತಿ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಮಾಜಿ ಸಚಿವ ಎಚ್. ಎಂ. ರೇವಣ್ಣ ಶ್ರಮಿಸಿದ್ದಾರೆ. ಆ ವೇಳೆ ನಾನೂ  ಸಮಿತಿಯಲ್ಲಿದ್ದೆ. ಆದರೆ ಯೋಜನೆಯ ಬಗ್ಗೆ ನನಗೆ ಮಾಹಿತಿಯಿಲ್ಲದ ಕಾರಣ ಸುಮ್ಮನಾದೆ.  ಈಗ ಕಾಂಗ್ರೆಸ್ ಆಡಳಿತದಲ್ಲಿದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.