ಬೆಂಗಳೂರು ಗ್ರಾಮಾಂತರ

ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಅಭಿವೃದ್ಧಿಗೆ ಚಿಂತನೆ

Published On :

ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪ ಇರುವ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಪುನಶ್ಚೇತನಗೊಳಿಸುವ ಮೂಲಕ ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಈ ಬಗ್ಗೆ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸುತ್ತೇನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ರಥೋತ್ಸವ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ್ದ ಅವರು ಸಮೀಪದಲ್ಲೇ ಇರುವ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಜಲಾನಯನ ಪ್ರದೇಶದ ಸಂಪೂರ್ಣ ಮಳೆ ನೀರು ಹರಿದು ಹೋಗುವುದು ಈ ಡ್ಯಾಂ ಮೂಲಕವೇ ಆಗಿದೆ. ಶತಮಾನದ ಇತಿಹಾಸ ಹೊಂದಿರುವ ಈ ಡ್ಯಾಂ ಎತ್ತರಿಸಿ ನೀರು ಶೇಖರಣೆಗೊಳ್ಳುವಂತೆ ಮಾಡಿದರೆ ಮಳೆಗಾಲದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗುತ್ತದೆ.  ಇದು ಸುತ್ತಮುತ್ತಲ ಪ್ರದೇಶದಲ್ಲಿ ಅಂತರ್ಜಲ ವೃದ್ಧಿಗೂ ಸಹಕಾರಿ ಮತ್ತು ಇಲ್ಲಿಂದ ದೊಡ್‌ಡಬಳ್ಳಾಪುರಕ್ಕೆ ನೀರು ಸರಬರಾಜು ಮಾಡುವುದು ಕಡಿಮೆ ವೆಚ್ಚದ ಮತ್ತು ಪರಿಣಾಮಕಾರಿ ಯೋಜನೆಯಾಗಲಿದೆ. ಈಗಾಗಲೇ ಈ ಬಗ್ಗೆ ದೇವನಹಳ್ಳಿ ಶಾಸಕರೂ ಮಾತನಾಡಿದ್ದಾರೆ.
ಈ ಹಿನ್ನಲೆಯಲ್ಲಿ ಪೋಲಾಗುತ್ತಿರುವ ನೀರು ಸಂಗ್ರಹಿಸಿ ಡ್ಯಾಂ ಎತ್ತರಿಸುವ ಮತ್ತು ನೀರು ಸಂಗ್ರಹಿಸುವ ಪ್ರಸ್ತಾವನೆಗೆ ಸರ್ಕಾರ ಮಂಜೂರಾತಿ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ವಿವರಿಸಿದರು. ಜಕ್ಕಲಮಡಗು ನೀರಿನ ಜೊತೆಗೆ ಇದೂ ಜನರಿಗೆ ಲಭ್ಯವಾದರೆ ನೀರಿನ ಬವಣೆ ಸಾಧ್ಯವಾದಷ್ಟೂ ನೀಗುತ್ತದೆ ಎಂದರು. ಭೇಟಿ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.