ಮಕ್ಕಳಲ್ಲಿನ ಪ್ರತಿಭೆ ಹೊರ ತರಲು ಸಾಂಸ್ಕೃತಿಕ ವೇದಿಕೆ ಅತಿ ಮುಖ್ಯ
ಕ,ಪ್ರ,ವಾರ್ತೆ , ಮಧುಗಿರಿ , ಜ.8
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಸಾಂಸ್ಕೃತಿಕ ವೇದಿಕೆಗಳು ಅತಿ ಮುಖ್ಯ ಎಂದು ಶಾಸಕ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟರು.
ಪಟ್ಟಣದ ಮಾಲೀಮರಿಯಪ್ಪ ರಂಗಮಂದಿರಲ್ಲಿ ಮೌಂಟ್ ವ್ಯೂ ಪಬ್ಲಿಕ್ ಶಾಲೆ ವತಿಯಿಂದ ಏರ್ಪಟಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಕಲಿಕೆಗೆ ಪೂರಕ ಪರಿಸರ, ಪೋಷಕರ ಪ್ರೋತ್ಸಾಹ ಮತ್ತು ಶಿಕ್ಷಕರ ಸಲಹೆ ಅಗತ್ಯ. ಸುಂದರ ಬದುಕಿಗೆ ಶಿಕ್ಷಣ ದಾರಿದೀಪ. ಮಕ್ಕಳಿಗೆ ಗುಣ ಮಟ್ಟದ ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥಾಪಕ ಅಧ್ಯಕ್ಷ ಜಿ.ಸಿದ್ದಗಂಗಪ್ಪ ಜ್ಞಾನಕ್ಕಿಂತ ಮಿಗಿಲಾದ ಐಶ್ವರ್ಯ ಮತ್ತೊಂದಿಲ್ಲ,ನಮ್ಮ ಶಾಲೆಯಲ್ಲಿ 650ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅವರಲ್ಲಿ ಅನೇಕ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ ಎಂದರು.
ಪುರಸಭೆ ಅಧ್ಯಕ್ಷ ಎನ್.ಗಂಗಣ್ಣ, ಸದಸ್ಯರಾದ ಎಂ.ಕೆ.ನಂಜುಂಡಯ್ಯ, ಎಂ.ಎಸ್.ಚಂದ್ರಶೇಖರ್, ಅಯೂಬ್, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಹಿರಿಯ ವಕೀಲ ಎಚ್.ಕೆ.ವಿ. ರೆಡ್ಡಿ, ಮುಖಂಡ ತುಂಗೋಟಿ ರಾಮಣ್ಣ, ಎಂ.ಎಸ್.ಶಂಕರನಾರಾಯಣ್, ಎಂ.ಜಿ.ಶ್ರೀನಿವಾಸಮೂರ್ತಿ, ಬಿಇಓ ವೈ.ಎನ್. ರಾಮಕೃಷ್ಣಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಮಹಾಲಿಂಗೇಶ್, ಬಿಆರ್ಸಿ ಚಿತ್ತಯ್ಯ ಮೊದಲಾದವರು ಉಪಸ್ಥಿತರಿದ್ದರು. ಲಾವಣ್ಯ ಪ್ರಾರ್ಥಿಸಿ ಕಾರ್ಯದರ್ಶಿ ಜಗದೀಶ್ ಕುಮಾರ್ ಸ್ವಾಗತಿಸಿದರು. ನಂತರ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಜನ ಮೆಚ್ಚುಗೆಗೆ ಪಾತ್ರವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

