ಚನ್ನವೀರನಹಳ್ಳಿ ಶಾಲೆಯಲ್ಲಿ ಸೈಕಲ್ ವಿತರಣೆ
ದೊಡ್ಡಬಳ್ಳಾಪುರ: ತಾಲೂಕಿನ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಸೈಕಲ್ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸವಲತ್ತುಗಳಿದ್ದರೂ ಅವುಗಳು ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ. ಸರ್ಕಾರ ಒದಗಿಸುವ ಎಲ್ಲ ಯೋಜನೆಗಳು ಪರಿಪೂರ್ಣವಾಗಿ ವಿದ್ಯಾರ್ಥಿಗಳು-ಶಿಕ್ಷಕರಿಗೆ ತಲುಪಿದರೆ ಶೈಕ್ಷಣಿಕವಾಗಿ ಮತ್ತಷ್ಟು ಸುಧಾರಣೆ ಕಾಣಬಹುದಿತ್ತು. ಸರ್ಕಾರಿ ಒದಗಿಸುವ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಅವುಗಳ ಬಗ್ಗೆ ಇತರರಿಗೂ ಅರಿವು ಮೂಡಿಸುವ ಪ್ರಯತ್ನ ಮಾಡಬೇಕು. ಇವೆಲ್ಲವೂ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಸುಧಾರಣೆಗೆ ಸಹಕಾರಿಯಾಗುತ್ತದೆ ಎಂದರು. ಕಳೆದ ಕೆಲ ವರ್ಷಗಳಿಂದ ಚನ್ನವೀರನಹಳ್ಳಿ ಸರ್ಕಾರಿ ಶಾಲೆ ಮಹತ್ವದ ಶೈಕ್ಷಣಿಕ ಸಾಧನೆಯಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯ ಎಂದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ನಾಗರಾಜು ಮಾತನಾಡಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ನರಸಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್, ಬಿಇಓ ತಿಮ್ಮೇಗೌಡ, ಶಿಕ್ಷಣ ಸಂಯೋಜಕ ನೀಲಕಂಠ ಗಾವಂಕರ್, ಕಾಂಗ್ರೆಸ್ ಮುಖಂಡ ಲಕ್ಷ್ಮೀಪತಿ, ಬೈರೇಗೌಡ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

