ಬೆಂಗಳೂರು ಗ್ರಾಮಾಂತರ

ಯುವಶಕ್ತಿಯಿಂದ ಮಾತ್ರ ದೇಶ ಪ್ರಗತಿ

Published On :

ದೇವನಹಳ್ಳಿ: ದೇಶ ಸ್ವಾಂತಂತ್ರ್ಯ ಪಡೆದು ಆರು ದಶಕಗಳೇ ಕಳೆದರೂ ಕುಡಿಯಲು ನೀರು ನೀಡಲು ಸಾಧ್ಯವಾಗುತ್ತಿಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ದುರಂತ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದ ನಂತರದ ಎರಡು ದಶಕಗಳಲ್ಲಿ ರಾಜಕೀಯದಲ್ಲಿ ಭ್ರಷ್ಟಾಚಾರ ಅಷ್ಟೊಂದು ಇರಲಿಲ್ಲ ನಂತರದ ದಶಕಗಳಲ್ಲಿ ಭ್ರಷ್ಟಾಚಾರ ಊಹಿಸಲಾಗದಷ್ಟು ಮಿತಿ ಮೀರಿದೆ ಉತ್ತಮ ಪ್ರಜಾಪ್ರಭುತ್ವ ಮತ್ತು ದೇಶದ ಭವಿಷ್ಯ ರೂಪಿಸಲು ಯುವಕರಿಂದ ಮಾತ್ರ ಸಾಧ್ಯ ಎಂದು ಕಿವಿಮಾತು ಹೇಳಿದರು.  ಇಲ್ಲಿನ ಕಾರ್ಮೆಲ್ ಆಂಗ್ಲ ಶಾಲೆಯ ಬೆಳ್ಳಿಹಬ್ಬ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತಾವು ಬಹಳಷ್ಟು ಹುದ್ದೆ ಪಡೆದಿದ್ದೇನೆ ಕಾನೂನಿನ ಚೌಕಟ್ಟಿನಲ್ಲಿ ಬರುವ ಸಂಪತ್ತಿನ  ತೃಪ್ತಿ ಯಾವುದರಿಂದಲೂ ಸಿಗುವುದಿಲ್ಲ ಎಂದರಲ್ಲದೆ ಯಾವುದೇ ಮನುಷ್ಯ ದುರಾಸೆಯಿಂದ ಸಂಪಾದಿಸಿದ ಹಣದಿಂದ ಸಂತೃಪ್ತಿ ಇರುವುದಿಲ್ಲ ಎಂದು ಸಂತೋಷ್ಹೆಗಡೆ ತಿಳಿಸಿ ತಾವು ರಾಜಕೀಯ ಪ್ರವೇಶ ಮಾಡುವುದಿಲ್ಲ ಮಾನವೀಯ ಮೌಲ್ಯಗಳನ್ನು ಯುವಕರು ಅರ್ಥಮಾಡಿಕೊಳ್ಳಬೇಕು  ಮತ್ತು ಮುಂದೆ ಬರಬೇಕು ಎಂದರು.
ಮುಖ್ಯ ಅತಿಥಿ ಶಾಸಕ ಪಿಳ್ಳಮುನಿಶಾಮಪ್ಪ ನಂದಿ ಹೊಂಗಿರಣ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿತ್ತಿರುವ ನಂದಿನಿ ಶಾಲೆಯ ಕಾರ್ಯರ್ಶಿ ವೈ.ಕೆ.ಚಂದ್ರಶೇಖರ್ ಸೇವೆ ಅಭಿನಂದನೀಯ ಎಂದರಲ್ಲದೆ ಬಭ್ರಷ್ಟಾಚಾರ ನಿರ್ಮೂಲನೆ ವಿದ್ಯಾವಂತ ಯುವಕರಿಂದ ಮಾತ್ರ ಸಾಧ್ಯ ಎಂದರಲ್ಲದೆ ಇಂದಿನ ಸುಳ್ಳಿನ ಪ್ರಪಂಚದಲ್ಲಿ ಸತ್ಯವನ್ನು ಹುಡುಕಬೇಕಾಗಿದೆ ಎಂದರು. ಜಿಪಂ ಸದಸ್ಯ ಬಿ.ರಾಜಣ್ಣ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವೇಕಾನಂದ ಕಾಲೇಜಿನ ನಿವೃತ್ತ ಉಪನ್ಯಾಸಕ ಪಿ.ಕೃಷ್ಣಪ್ಪ ಹಾಗೂ ಎಂ.ಗೋಪಾಲಪ್ಪ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ, ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ ನೀಡಲಾಯಿತು.
ಮುಖ್ಯ ಶಿಕ್ಷಕ ಎನ್.ಮಂಜುನಾಥ್, ಶಿಕ್ಷಕ ಅರಸೇಗೌಡ, ಬಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.  ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.