ಆಯ್ದ ಮಕ್ಕಳಿಗೆ ಕಲಿಕೋತ್ಸವ ಸೀಮಿತಗೊಳಿಸಬೇಡಿ
ಮಾಗಡಿ: ಕೇವಲ ಆಯ್ದ ಮಕ್ಕಳಿಗೆ ಕಲಿಕೋತ್ಸವ ಸೀಮಿತಗೊಳಿಸದೆ, ಎಲ್ಲಾ ಶಾಲೆಗಳ ಮಕ್ಕಳು ಕಲಿಕೋತ್ಸವದಲ್ಲಿ ಭಾಗವಹಿಸುವಂತಹ ವಾತಾವರಣವನ್ನು ಶಿಕ್ಷಕರು ನಿರ್ಮಿಸಲು ಶಕ್ತಿ ಮೀರಿ ಶ್ರಮಿಸಬೇಕಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಕರೆ ನೀಡಿದರು.
ಅವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಇತ್ತೀಚೆಗೆ ಶಿಕ್ಷಣದ ಮೌಲ್ಯ ಕುಸಿಯುತ್ತಿಎಂದರು.
ಸ್ಪರ್ಧಾತ್ಮಕ ಪ್ರಪಂಚದಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ನಡುವೆ ಪೈಪೋಟಿ ನಡೆದಿದೆ. ಶಿಕ್ಷಕರಾದವರು ದಿನೇ ದಿನೇ ಅಧ್ಯಯನಶೀಲರಾಗಿ ಜ್ಞಾನದ ದಾಹ ಹೆಚ್ಚಿಸಿಕೊಳ್ಳುವ ಅಗತ್ಯವಿದೆ ಎಂದರು.
ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ ಮಕ್ಕಳ ಅದ್ಭುತ ಸಾಧನೆಗೆ ಕಲಿಕೋತ್ಸವ ಮಾನದಂಡವಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡಮಟ್ಟದಲ್ಲಿ ವಿದ್ಯೆ, ಸಾಮರ್ಥ್ಯ ತೋರಿಸಲು ಕಲಿಕೋತ್ಸವ ಅಗತ್ಯವಿದೆ ಎಂದರು.
ತಾ.ಪಂ. ಅಧ್ಯಕ್ಷ ಜಿ. ಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸರ್ಕಾರಿ ಶಾಲೆ ಎಂಬ ತಾತ್ಸರ ಮನೋಭಾವ ಪೋಷಕರು ಬಿಡಬೇಕು ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ರಂಗಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಮುದ್ದುರಾಜ ಯಾದವ್, ತಾ.ಪಂ. ಉಪಾಧ್ಯಕ್ಷೆ ಭಾರತಿ ಮಹದೇವಯ್ಯ,ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕಾಂತರಾಜು, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಬಿಇಓ ಎ.ಆರ್. ರಂಗಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಟಿ.ಎಸ್. ಶಂಕರಯ್ಯ, ಇಸಿಓ ಪರಮೇಶ್ವರ್, ಸಿ.ಆರ್.ಪಿ. ಜಗದೀಶ್, ತಾ.ಪಂ ಇಓ ಕೆ.ಬಿ. ಅಕ್ಕೋಜಿ, ನಿವೃತ್ತ ಶಿಕ್ಷಕರ ಸಂಘದ ಅಧ್ಯಕ್ಷ ಎಲ್. ನಂಜಯ್ಯ, ರಂಗಸ್ವಾಮಿ, ಜಯರಾಮು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

