ಬೆಂಗಳೂರು ಗ್ರಾಮಾಂತರ

ಮಾಸಾಂತ್ಯದಲ್ಲಿ ಪಡಿತರ ಚೀಟಿ ವಿತರಣೆ: ಶಿವಣ್ಣ

Published On :

ಕ.ಪ್ರ.ವಾರ್ತೆ , ಆನೇಕಲ್ಲು , ಜ.10
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆಯನ್ನು ಜನವರಿ ಅಂತ್ಯದೊಳಗೆ ನೀಡಲಾಗುವುದು ಎಂದು ಆನೇಕಲ್ ಶಾಸಕ ಬಿ.ಶಿವಣ್ಣ ತಿಳಿಸಿದ್ದಾರೆ.
ಅವರು ಆನೇಕಲ್ಲಿನ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ನಗರ ಜಿಲ್ಲಾಧಿಕಾರಿ ಡಾ. ಜಿ.ಸಿ. ಪ್ರಕಾಶ್ ಮತ್ತು ಅಧೀನ ಅಧಿಕಾರಿಗಳ ಸಭೆಯ ನಂತರ ಮಾತನಾಡಿ 5 ಹೋಬಳಿಗಳ 162 ಹಳ್ಳಿಗಳಲ್ಲಿ ವಾಸಿಸುತ್ತಿರುವ 25 ಸಹಸ್ರ ಅರ್ಹ ಫಲಾನುಭವಿಗಳಿಗೆ ನಿವೇಶನಗಳ ಹಕ್ಕು ಪತ್ರ ನೀಡಲಾಗುವುದು. ಮೊದಲ ಹಂತದಲ್ಲಿ ಬಡಾವಣೆ ವಿಂಗಡಿಸಿ ರಸ್ತೆ ಮತ್ತು ಸಂಖ್ಯೆಗಳನ್ನು ನೀಡಲಾಗುವುದು. ಹಂತ ಹಂತವಾಗಿ ಜನ ಸಾಂದ್ರತೆ ಅನುಸರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು.
ಪಡಿತರ ಚೀಟಿ: ಆನೇಕಲ್ ತಾಲೂಕಿನಾದ್ಯಂತ 18 ಸಹಸ್ರ ಜನರು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದರು. ಕ್ರಮ ಬದ್ಧ ತಪಾಸಣೆ ಹಾಗೂ ವಿವಿಧ ಹಂತಗಳ ಮಾಹಿತಿ ನಂತರ ಪಡಿತರ ಚೀಟಿಗಳನ್ನು ನೀಡಲು ತಾಲೂಕು ಆಡಳಿತ ಸಜ್ಜುಗೊಂಡಿದೆ. ತಾಲೂಕಿನಲ್ಲಿ 5 ಕೈಗಾರಿಕಾ ಪ್ರದೇಶ ಗಳಿದ್ದು ಹೊರ ರಾಜ್ಯದ ಜನರು ಹೆಚ್ಚಾಗಿ ನೆಲೆಸಿದ್ದಾರೆ. ಕೃಷಿ ಕೂಲಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರು ಪಡಿತರದ ಮೇಲೆ ಅವಲಂಬನೆಯಾಗಿರುವುದನ್ನು ಗಮನಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ರಾಜ ಕಾಲುವೆ ತೆರವು: ಆನೇಕಲ್ ತಾಲೂಕಿನಲ್ಲಿ 65ಕ್ಕೂ ಹೆಚ್ಚು ಕೆರೆಗಳಿದ್ದು ಕೆರೆ ಸಂರಕ್ಷಣೆ ಸರ್ಕಾರದ
ಜವಾಬ್ದಾರಿಯಾಗಿದೆ. ಕೆರೆಗಳಿಗೆ ಬೇಲಿ ಸುತ್ತಿ ಒತ್ತುವರಿ ತೆರವು ಮಾಡಿಸುವಂತೆ ತಹಸೀಲ್ದಾರ್ ಹಾಗೂ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಡಾ. ಜಿ. ಸಿ. ಪ್ರಕಾಶ್ ತಿಳಿಸಿದ್ದಾರೆ. ರಾಜ ಕಾಲುವೆಗಳನ್ನು ತೆರವು ಮಾಡಿಸಲು ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಕೆರೆಗೆ ನೀರು ಸರಾಗವಾಗಿ ಬಂದರೆ ಅಂತರ್ಜಲ ವೃದ್ಧಿಯಾಗುತ್ತದೆ. ಚುನಾಯಿತ ಪ್ರತಿನಿಧಿಗಳು ಈ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕೆಂದರು.
ಸಭೆಯಲ್ಲಿ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ ಅರಣ್ಯ ವತ್ತುವರಿ ತೆರವು ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಜಿಲ್ಲಾ ಪಂಚಾಯ್ತಿ ಸದಸ್ಯರು,  ತಾಲೂಕು ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಅದ್ಯಕ್ಷರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಮತ್ತು ಪರಿಹಾರೋಪಾಯದ ಬಗ್ಗೆ ವಿವರಣೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.