ಬೆಂಗಳೂರು ಗ್ರಾಮಾಂತರ

ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ಯಾರೊಂದಿಗೂ ಹೊಂದಾಣಿಕೆ ಇಲ್ಲ: ಎಚ್ಡಿಕೆ

Published On :

ರಾಮನಗರ: ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಬೇರೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾತುಕತೆ ನಡೆದಿಲ್ಲ ಎಂದಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು  ಜೆಡಿಎಸ್ ಜತೆ ಬಿಎಸ್ಸಾರ್ ಕಾಂಗ್ರೆಸ್ ವಿಲೀನದ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ.  ಈ ವಿಷಯವಾಗಿ ಅಪಪ್ರಚಾರದ ಮೂಲಕ ನನಗೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸಲಾಗುತ್ತಿದೆ. ಪ್ರತಿಪಕ್ಷದ ನಾಯಕನಾಗಿ ಕೆಲಸ ಮಾಡುವ ಆಸೆ ನನಗಿಲ್ಲ. ಆ ಸ್ಥಾನಕ್ಕಿಂತಲೂ ಶಾಸಕನಾಗಿಯೇ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವ ಶಕ್ತಿ ನನಗಿದೆ ಎಂದು ಅವರು ತಿಳಿಸಿದ್ದಾರೆ.  ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ದೊಂಬರದೊಡ್ಡಿ, ಪಿಚ್ಚನಕೆರೆ, ಕೊಟ್ಟಗಾಳು ಸೇರಿದಂತೆ ವಿವಿಧೆಡೆ ಶನಿವಾರ ಗ್ರಾಮ ಸಂಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.  ಬೇರೆ ರಾಜ್ಯಗಳ ನಾಯಕರಿಂದ ಕರ್ನಾಟಕ ರಾಜ್ಯ ರಾಜಕಾರಣದ ಮೇಲೆ ಯಾವುದೇ ಪ್ರಭಾವ ಬೀರದು. ಇಲ್ಲಿನ ಜನತೆ ಪ್ರಜ್ಞಾವಂತರಾಗಿದ್ದು, ಯಾರಿಗೋ ಆಕರ್ಷಿತರಾಗಿ ಮತ ನೀಡುವವರಲ್ಲ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಕಚ್ಚಾಟದಿಂದ ರೋಸಿ ಹೋಗಿರುವ ಜನತೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬೆಂಬಲಿಸಲಿದ್ದಾರೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.