ಬೆಂಗಳೂರು ಗ್ರಾಮಾಂತರ

ಸ್ವಪ್ರಯತ್ನ, ಸ್ವಯಂ ಅಧ್ಯಯನ ಸಾಧನೆಗೆ ಮೂಲ: ಡಿ. ತಿಮ್ಮಯ್ಯ

Published On :

ಕ.ಪ್ರ.ವಾರ್ತೆ ,  ದೊಡ್ಡಬಳ್ಳಾಪುರ , ಜ.12
ಸ್ವಪ್ರಯತ್ನ ಮತ್ತು ಸ್ವಯಂ ಅಧ್ಯಯನದಿಂದ ಸಾಧನೆ ಸುಲಭ. ನಿಶ್ಚಲ ಗುರಿಯೊಂದಿಗೆ ನಿರಂತರ ಸಾಧನೆ ಮಾಡಿದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬಹುದಾಗಿದೆ. ಸ್ವಯಂ ಮಾರ್ಗದರ್ಶನ ಎಲ್ಲ ಸಾಧಕರ ಗುಟ್ಟು ಎಂದು ಪತ್ರಕರ್ತ ದೀಪಕ್ ತಿಮ್ಮಯ್ಯ ಅಭಿಪ್ರಾಯಪಟ್ಟರು.
ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಜಾಗೃತ ಪರಿಷತ್ತಿನ ನೇತೃತ್ವದಲ್ಲಿ ಆರಂಭಿಸಲಾಗಿರುವ ಕೆಎಎಸ್ ಮತ್ತು ಐಎಎಸ್ ಅಧ್ಯಯನ ಕೇಂದ್ರ ಮತ್ತು ಪ್ರತಿಭಾವಂತರಿಗೆ ಅಭಿನಂದನೆ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಜಾಗೃತ ಪರಿಷತ್ತಿನ ಟ್ರಸ್ಟಿ ಡಾ.ಎ.ಓ.ಆವಲಮೂರ್ತಿ ಮಾತನಾಡಿ ಇಂದಿನ ಸ್ಪರ್ಧಾಯುಗದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದರೂ ಸೂಕ್ತ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ಸಾಧ್ಯವಾಗಿಲ್ಲ.
ಈ ಹಂತದಲ್ಲಿ ಕನ್ನಡ ಜಾಗೃತ ಪರಿಷತ್ತು ಇತರ ಸಂಘಟನೆಗಳ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಆರಂಭಿಸಿದೆ. ವಿದ್ಯಾರ್ಥಿಗಳು ಸ್ಪರ್ಧಾಕಾಂಕ್ಷಿಗಲು ಇದರ ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ, ಕಜಾಪದ ಟ್ರಸ್ಟಿಗಳಾದ ತ.ನ.ಪ್ರಭುದೇವ್, ಡಿ.ವಿ.ಅಶ್ವತ್ಥಪ್ಪ, ರುಮಾಲೆ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.
ಬೋಧಿವೃಕ್ಷ ಎಜುಕೇಶನಲ್ ಟ್ರಸ್ಟ್, ವಿಕಾಸ ಪ್ರಶಿಕ್ಷಣ ಕೇಂದ್ರ, ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿ ಸಹಕಾರ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.