ಫೆ. 2ರಂದು ಜಿಲ್ಲಾ ಮಟ್ಟದ ಪ್ರಥಮ ಚಿಕಿತ್ಸಾ ರಸಪ್ರಶ್ನೆ
ರಾಮನಗರ: ಸೇಂಟ್ಜಾನ್ಸ್ ಆಂಬ್ಯುಲೆನ್ಸ್ನ ಜಿಲ್ಲಾ ಘಟಕದಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಥಮ ಚಿಕಿತ್ಸಾ ರಸಪ್ರಶ್ನೆ ಸ್ಪರ್ಧೆ ಫೆ.2ರಂದು ನಗರದ ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ. ಒಂದು ಶಾಲೆಯಿಂದ 4 ತಂಡಗಳು ಭಾಗವಹಿಸಬಹುದಾಗಿದ್ದು, ಪ್ರತಿ ತಂಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಇರಬೇಕು. ಶಾಲೆಯ ಮುಖ್ಯೋಪಾಧ್ಯಾಯರಿಂದ ಅನುಮತಿ ಪತ್ರದೊಂದಿಗೆ ಜ.28ರೊಳಗೆ ಪ್ರಗತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯವರಲ್ಲಿ ನೋಂದಾಯಿಸಿಕೊಂಡು, ಪ್ರಥಮ ಚಿಕಿತ್ಸಾ ಪುಸ್ತಕಗಳನ್ನು ಪಡೆಯುವುದು. ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿಲ್ಲ. ಅತಿ ಹೆಚ್ಚು ಅಂಕ ಗಳಿಸಿದ 3 ತಂಡಗಳಿಗೆ ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಡಾ.ಕೆ.ಪಿ. ಹೆಗಡೆ ತಿಳಿಸಿದ್ದಾರೆ.
ನಾಳೆ ಗೀತ ನಮನ ಕಾರ್ಯಕ್ರಮ
ರಾಮನಗರ: ಜಿಲ್ಲೆಯ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಿಧನರಾದ ಪತ್ರಕರ್ತ ಸಿ.ಎ.ಶಾಂತಕುಮಾರ್ ಅವರಿಗೆ ಶ್ರದ್ಧಾಂಜಲಿ ಹಾಗೂ ಗೀತ ನಮನ ಕಾರ್ಯಕ್ರಮವು ಜ.14ರ ಬೆಳಗ್ಗೆ ನಗರದ ಸ್ಫೂರ್ತಿ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ರಾಜು, ಕಾಂಗ್ರೆಸ್ ಮುಖಂಡ ಮರಿದೇವರು, ಬಿಜೆಪಿ ಮುಖಂಡ ರವಿಕುಮಾರ್ಗೌಡ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಪಿ.ಜಯರಾಂ, ಡಿಡಿಪಿಐ ಪ್ರಹ್ಲಾದಗೌಡ ಮತ್ತಿತರರು ಭಾಗವಹಿಸುವರು. ಶಿವಾಜಿರಾವ್ ಮತ್ತು ತಂಡದಿಂದ ಗೀತನಮನ ಕಾರ್ಯಕ್ರಮ ನಡೆಯಲಿದೆ.
ಕಾರು ಪಲ್ಟಿ: ಚಾಲಕ ಸಾವು
ರಾಮನಗರ: ರಸ್ತೆಯಲ್ಲಿ ಹಾಕಲಾಗಿದ್ದ ಅವೈಜ್ಞಾನಿಕ ರಸ್ತೆ ಉಬ್ಬನ್ನು ಗುರುತಿಸದ ಚಾಲಕ ಕಾರನ್ನು ಹಾರಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ, ಚಾಲಕ ಮೃತಪಟ್ಟ ಘಟನೆ ನಗರದ ವಿದ್ಯಾನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಪ್ರಕಾಶನಗರದ ವಾಸಿ ಚಂದರ್ (33) ಮೃತ ವ್ಯಕ್ತಿ. ಶನಿವಾರ ಮುಂಜಾನೆ 3ರ ಸಮಯದಲ್ಲಿ ಚನ್ನಪಟ್ಟಣಕ್ಕೆ ತೆರಳಲು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಆಗಮಿಸುತ್ತಿದ್ದರು. ವಿದ್ಯಾ ನಗರದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹಾಕಲಾಗಿರುವ ಅವೈಜ್ಞಾನಿಕ ರಸ್ತೆ ಉಬ್ಬನ್ನು ಗುರುತಿಸದೆ ಕಾರನ್ನು ಹಾರಿಸಿದ್ದಾರೆ. ಇದರಿಂದ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಚಾಲಕ ಚಂದರ್ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

