ಮಕ್ಕಳ ಬಾಲ್ಯ ಕಸಿದುಕೊಳ್ಳುವ ಪ್ರಯತ್ನ ಸಲ್ಲದು: ವೆಂಕಟಾಚಲಯ್ಯ
ಕ.ಪ್ರ.ವಾರ್ತೆ , ದೊಡ್ಡಬಳ್ಳಾಪುರ , ಜ.12
ಇಲ್ಲಿನ ಮಾರುತಿ ಶಾಲೆ ಮತ್ತು ಜಕ್ಕಸಂದ್ರ ನಾರಾಯಣಪ್ಪ ಆಂಗ್ಲ ಪ್ರೌಡಶಾಲೆಯ ವಾರ್ಷಿಕೋತ್ಸವ ಸಮಾರಂಭ ಶಾಲಾ ಆವರಣದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು-ಸಂಯಮ ಮತ್ತು ಸಾಧನಾಶೀಲತೆ ಇರಬೇಕು. ಆ ಗುಣಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಚೈತನ್ಯ ಶಿಕ್ಷಕರಲ್ಲಿರಬೇಕು. ಆಗ ಮಾತ್ರ ಕಲಿಕೆ ಪರಿಪೂರ್ಣವಾಗುತ್ತದೆ. ಉನ್ನತ ಆದರ್ಶಗಳ ತಳಹದಿಯಲ್ಲಿ ನಮ್ಮ ಭವಿಷ್ಯತ್ತನ್ನು ರೂಪಿಸುವ ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಇಂದಿನ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಸಾಪ ತಾ.ಅಧ್ಯಕ್ಷ ರವಿಕಿರಣ್, ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಪ್ರಯತ್ನಗಳು ಸರಿಯಲ್ಲ. ಮಗುವಿನ ಆಲೋಚನೆಗಳನ್ನು ಪ್ರೀತಿಸುವ ಮತ್ತು ಅವುಗಳ ಆಧಾರದಲ್ಲಿ ವ್ಯವಸ್ಥಿತ ವ್ಯಕ್ತಿತ್ವ ನಿರ್ಮಾಣ ಶಿಕ್ಷಣದ ಗುರಿಯಾಗಬೇಕು. ಮಕ್ಕಳ ಬುದ್ಧಿವಂತಿಕೆಯನ್ನು ಅಂಕಗಳ ಆಧಾರದಲ್ಲಿ ನೋಡದೆ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವಂತಾಗಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ಸಹಕಾರ್ಯದರ್ಶಿ ಜಯಲಕ್ಷ್ಮಿ, ಎಸ್‌ಡಿಯುಪಿಯುಸಿ ಪ್ರಾಂಶುಪಾಲ ಎಸ್.ಶ್ರೀನಿವಾಸ್, ಉಪನ್ಯಾಸಕ ನವೀನ್‌ಕುಮಾರ್, ಪಾಲ್, ಗ್ರಾಮ ಪಂಚಾಯಿತಿ ಸ್ಥಳೀಯ ಮುಖಂಡರು, ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಹಾಜರಿದ್ದರು.
ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳಿಂದ ನಡೆದ ವೇಷಭೂಷಣ ಪ್ರದರ್ಶನ ಗಮನ ಸೆಳೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

