ಛಲವಾದಿ ಮಹಾಸಭಾ ಸಂಘಟನೆ ಜಿಲ್ಲಾಧ್ಯಕ್ಷ ವೆಂಕಟೇಶ್
ರಾಮನಗರ: ಛಲವಾದಿ ಮಹಾಸಭಾ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ವೆಂಕಟೇಶ್ ಅವರು ನೇಮಕಗೊಂಡಿದ್ದಾರೆ. ರಾಜ್ಯ ಕಾರ್ಯದರ್ಶಿ ಡಿ. ಕೃಷ್ಣಪ್ಪ ಅವರು ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವೆಂಕಟೇಶ್ ಅವರಿಗೆ ನೇಮಕ ಪತ್ರ ನೀಡಿ ಅಭಿನಂದಿಸಿದರು.
ನಂತರ ಮಾತನಾಡಿದ ಅವರು, ರಾಜ್ಯಾದ್ಯಂತ ದಲಿತರ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ. ಶೋಷಿತ ಸಮುದಾಯ ಸಂಘಟಿತರಾಗದ ಹೊರತು ದೌರ್ಜನ್ಯಕ್ಕೆ ಕೊನೆ ಹಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಮರ್ಥವಾಗಿ ಸಂಘಟನೆಯನ್ನು ಬಲಪಡಿಸಲು ಒತ್ತು ನೀಡಲಾಗಿದೆ ಎಂದರು.
ಛಲವಾದಿ ಸಂಘಟನೆಯು ರಾಜ್ಯಾದ್ಯಂತ ಒಟ್ಟಾರೆ ರು.600 ಕೋಟಿ ಆಸ್ತಿಯನ್ನು ಹೊಂದಿದೆ.
ಬೆಂಗಳೂರಿನಲ್ಲಿ ರು.25 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಲಾಗುತ್ತಿದೆ. ರು.6 ಕೋಟಿ ವೆಚ್ಚದಲ್ಲಿ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದರು.
ರಾಜ್ಯದ ಛಲವಾದಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಧು-ವರರ ಸಂಪರ್ಕ ತಾಣವನ್ನು ಸ್ಥಾಪಿಸಲಾಗಿದೆ. ಛಲವಾದಿ ಸಂಘಟನೆಯ ಎಲ್ಲ ಮಾಹಿತಿಗಳು ವೆಬ್ಸೈಟ್ನಲ್ಲಿ ದೊರೆಯಲಿವೆ. ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಉನ್ನತ ಶಿಕ್ಷಣ ನೀಡುವ ಗುರಿ ಹೊಂದಲಾಗಿದ್ದು ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲಾಗುವುದು.
ರಾಮನಗರ ಜಿಲ್ಲೆಯಲ್ಲಿ ಛಲವಾದಿ ಭವನ ನಿರ್ಮಾಣಕ್ಕೆ ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗಿದೆ. ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಸಚಿವರು ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಸಂಘಟನೆಯ ನೂತನ ಜಿಲ್ಲಾಧ್ಯಕ್ಷ ವೆಂಕಟೇಶ್ ಮಾತನಾಡಿ, ರಾಜ್ಯಾಧ್ಯಕ್ಷರು ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದ್ದಾರೆ.
ಅವರ ನಂಬಿಕೆ ಚ್ಯುತಿ ಬಾರದ ಹಾಗೆ ಸಮುದಾಯವನ್ನು ಸಂಘಟಿಸುತ್ತೇನೆ.
ಪ್ರತಿ ಗ್ರಾಮಗಳಲ್ಲೂ ಗ್ರಾಮ ಶಾಖೆಗಳನ್ನು ಸ್ಥಾಪನೆ ಮಾಡುವ ಮೂಲಕ ಜನಾಂಗ ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

