ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಮ್ಯಾ
ಕ.ಪ್ರ. ವಾರ್ತೆ , ದೊಡ್ಡಬಳ್ಳಾಪುರ , ಜ. 14
ದೊಡ್ಡಬಳ್ಳಾಪುರದ ರಮ್ಯಾ ಜಿ.ಲಕ್ಷ್ಮೀಪತಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಸಿದ್ಧಬೈರೇಗೌಡ ಆಯ್ಕೆಯಾಗಿದ್ದಾರೆ.
ತೀವ್ರ ಕುತೂಹಲ ಕೆರಳಿದ್ದ ಚುನಾವಣೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು-ಪದಾಧಿಕಾರಿಗಳು ಮತ್ತು ಲೋಕಸಭಾ ಕ್ಷೇತ್ರದ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ವಿವಿಧ ಯುವ ಸಮಿತಿಗಳಿಗೆ ತಾಲೂಕಿನಿಂದ ಆಯ್ಕೆಯಾಗಿರುವ ಕಾರ್ಯಕರ್ತರನ್ನು ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ತಾ.ಕಾರ್ಯದರ್ಶಿ ಲಕ್ಷ್ಮೀಪತಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಿ.ರಂಗರಾಜು, ಕಾರ್ಯದರ್ಶಿ ಡಿ.ವಿ.ಅಶ್ವತ್ಥಪ್ಪ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ರಾಜ್ಕುಮಾರ್, ತಾಲೂಕು ಅಧ್ಯಕ್ಷ ಎಂ.ಸಿ.ರಮೇಶ್, ಮುಖಂಡರಾದ ಎಂ.ಸಿ.ರಮೇಶ್ ಮತ್ತಿತರರು ಅಭಿನಂದಿಸಿದ್ದಾರೆ.
ಪದಾಧಿಕಾರಿಗಳ ವಿವರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಗೆ ಮಾರುತಿ (ಅಧ್ಯಕ್ಷ), ದೀಪಕ್ ಕಾರ್ತಿಕ್ (ಉಪಾಧ್ಯಕ್ಷ), ರಮ್ಯಾ, ಮಂಜುನಾಥ್, ರಮೇಶ್, ಡಿ.ಎಂ.ಮಂಜುನಾಥ್, ಲೋಕೇಶ್ಗಾಂಧಿ, ಇಮ್ರಾನ್ ಮಿಕ್ಟರ್(ಪ್ರಧಾನ ಕಾರ್ಯದರ್ಶಿಗಳು), ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಮಿತಿಗೆ ಸಿದ್ಧಬೈರೇಗೌಡ (ಅಧ್ಯಕ್ಷ), ಎಲ್.ವಿ.ವೆಂಕಟರಾಮು(ಉಪಾಧ್ಯಕ್ಷ), ಜವಾಜಿ ರಾಜೇಶ್, ರಮೇಶ್, ಮಂಜುನಾಥ್, ಇಮ್ರಾನ್ಖಾನ್, ಬಿ.ಟಿ. ರಾಘವೇಂದ್ರಪ್ರಸಾದ್, ರಾಮಾಂಜಿನಪ್ಪ (ಪ್ರಧಾನ ಕಾರ್ಯದರ್ಶಿಗಳು) ಆಯ್ಕೆಯಾಗಿದ್ದಾರೆ. ಶಾಂತಿಯುತವಾಗಿ ಚುನಾವಣೆಗೆ ಸಹಕರಿಸಿದ ಕಾರ್ಯಕರ್ತರಿಗೆ ಪಕ್ಷ ಅಭಿನಂದನೆ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

