ಫೆ.15ಕ್ಕೆ ತಾಲೂಕು ಸಾಹಿತ್ಯ ಸಮ್ಮೇಳನ
ಚನ್ನಪಟ್ಟಣ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಫೆ.15 ರಂದು ನಗರಸಭೆ ಆವರಣದಲ್ಲಿ ತೃತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ವಿಸ್ತೃತ ಚರ್ಚಿಸಿ, ಸ್ವಾಗತ ಸಮಿತಿಯೊಂದನ್ನು ರಚಿಸಲಾಯಿತು. ಸಮ್ಮೇಳನದಲ್ಲಿ ಸ್ಮರಣ ಸಂಚಿಕೆ ಹಾಗೂ ಕವನ ಸಂಕಲನವನ್ನು ಹೊರತರಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರ ಚರ್ಚಿಸಲಾಗಿ ಸಮ್ಮೇಳನದ ಯಶಸ್ವಿಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿ ವರ್ಗವನ್ನು ಆಹ್ವಾನಿಸಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸುವುದಕ್ಕೆ ಮುಂದಿನ ಸಭೆ ಕರೆಯುವಂತೆ ಸಭೆ ತಾಲೂಕು ಘಟಕಕ್ಕೆ ಸೂಚಿಸಿತು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಂ.ಶಿವಮಾದು ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ.ನಾಗೇಶ್, ಮಾಜಿ ಜಿಲ್ಲಾ ಕಸಾಪ ಅಧ್ಯಕ್ಷ ಸು.ತ.ರಾಮೇಗೌಡ, ರೈತಸಂಘದ ಅಧ್ಯಕ್ಷ ಎಸ್.ಲಕ್ಷ್ಮಣಸ್ವಾಮಿ, ನಿಕಟಪೂರ್ವ ಕಸಾಪ ತಾಲೂಕು ಅಧ್ಯಕ್ಷ ಎಚ್.ಕೃಷ್ಣೇಗೌಡ, ನಿಕಟಪೂರ್ವ ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ಚಿಕ್ಕಪುಟ್ಟೇಗೌಡ, ಜಿಲ್ಲಾ ಗೌರವ ಕಾರ್ಯದರ್ಶಿ ಸಿ.ರಾಜಶೇಖರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

