ಗ್ರಾ.ಪಂ ಅಧ್ಯಕ್ಷರು, ಸದಸ್ಯರ ಸ್ವಜನ ಪಕ್ಷಪಾತ
ಕ.ಪ್ರ.ವಾರ್ತೆ , ಚನ್ನಪಟ್ಟಣ , ಜ.16
ರಾಜೀವ್ ಗಾಂಧಿ ಚೇತನ ಯೋಜನೆಯಡಿ ನೀಡಲಾಗುವ ತರಬೇತಿಗೆ ನಿರುದ್ಯೋಗಿ ಯುವಕರನ್ನು ಆಯ್ಕೆ ಮಾಡುವಲ್ಲಿ ಗ್ರಾ.ಪಂ ಅಧ್ಯಕ್ಷರು ಮತ್ತು ಸದಸ್ಯರು ಸ್ವಜನ ಪಕ್ಷಪಾತ ಎಸಗಿದ್ದಾರೆ ಎಂದು ಆರೋಪಿಸಿ ಕೋಡಂಬಹಳ್ಳಿ ಗ್ರಾ.ಪಂ ವ್ಯಾಪ್ತಿಯ ಯುವಕರು ಪಂಚಾಯಿತಿ ಕಚೇರಿಗೆ ಬೀಗಜಡಿದು ಪ್ರತಿಭಟನೆ ನಡೆಸಿದರು.
ಗುರುವಾರ ಬೆಳಿಗ್ಗೆ ಕಚೇರಿ ಆರಂಭವಾಗುತ್ತಿದ್ದಂತೆ ಬೀಗಜಡಿದು ಪ್ರತಿಭಟನೆಗೆ ಕುಳಿತ ಯುವಕರು ಅಧ್ಯಕ್ಷರು ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರಲ್ಲದೆ, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನ್ಯಾಯಕೊಡಿಸುವ ವರೆಗೂ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದರು.
ನಿರುದ್ಯೋಗಿ ಕಡುಬಡ ಯುವಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ರಾಜೀವ್ ಗಾಂದಿ ಚೇತನ ಯೋಜನೆಯನ್ನು ಜಾರಿಗೆ ತಂದಿದೆ. ಈಯೋಜನೆಯಡಿ ಅರ್ಹಫಲಾನುಭವಿಗಳನ್ನು ಆಯ್ಕೆಮಾಡಿ ಅವರಿಗೆ ನೆರವಾಗಬೇಕಾದ ಗ್ರಾ.ಪಂ ಸ್ವಜನಪಕ್ಷಪಾತ ನಡೆಸುವ ಮೂಲಕ ಅಧ್ಯಕ್ಷರ ಪತ್ನಿ, ಸದಸ್ಯರ ಸಂಬಂಧಿಗಳಿಗೆ ತರಬೇತಿ ಪಡೆಯುವ ಅವಕಾಶ ದೊರಕಿದೆ ಕೂಡಲೇ ಈಪಟ್ಟಿಯನ್ನು ರದ್ದುಪಡಿಸಬೇಕೆಂದು ಪ್ರತಿಭಟನಾಕಾರರು ಪಟ್ಟುಹಿಡಿದರು.
ಯೋಜನೆಗಳಲ್ಲಿ ಅವ್ಯವಹಾರ ನಡೆದಿದ್ದು ಗ್ರಾ.ಪಂ ಸದಸ್ಯರು ಮತ್ತು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಪ್ರತಿಭಟನಾ ಕಾರರು ಆಗ್ರಹಿಸಿದರು.
ಇಒ ಭೇಟಿ: ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ರಾಜೀವ್ ಗಾಂಧಿ ಚೇತನ ಯೋಜನೆಗೆ ಅರ್ಹರನು ್ನಆಯ್ಕೆಮಾಡುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ ಬಳಿಕ ಪ್ರತಿಭಟನಾ ಕಾರರು ಬೀಗ ಮುದ್ರೆಯನ್ನು ತೆರವು ಗೊಳಿಸಿದರು.
ಪ್ರತಿಭಟನೆಯಲ್ಲಿ ಯುವ ಮುಖಂಡರಾದ ರಂಜನ್, ವಿನೋದ್, ಮಹೇಶ್, ಶಿವಕುಮಾರ್, ಮಹೇಂದ್ರ, ಗಿರಿ, ಉಮೇಶ್, ಪ್ರಶಾಂತ್, ಪುನಿತ್, ರಾಜೀವ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

