ದೊಡ್ಡಬಳ್ಳಾಪುರದಲ್ಲಿ ಮಹ್ಮದೀಯರಿಂದ ರೋಗಿಗಳಿಗೆ ಹಣ್ಣು ವಿತರಣೆ
ದೊಡ್ಡಬಳ್ಳಾಪುರ: ನಗರದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ್ರ ಜನ್ಮದಿನದ ಸವಿನೆನಪಿನ ಅಂಗವಾಗಿ ಹಲವು ಮಹ್ಮದೀಯ ಯುವ ಮುಖಂಡರು ಮತ್ತು ಸಂಘಟನೆಗಳ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು.
ಈದ್ಮಿಲಾದ್ ವಿಶೇಷ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗಿತ್ತು. ಮಹ್ಮದ್ರ ಜನ್ಮದಿನದ ಅಂಗವಾಗಿ ಮುಸಲ್ಮಾನ ಬಾಂಧವರು ಇಲ್ಲಿನ ಅಲ್ಲಾವುದ್ದೀನ್ ಚಿಷ್ಟಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಮುಸಲ್ಮಾನ ಬಾಂಧವರು ಸುಖ-ಶಾಂತಿ, ನೆಮ್ಮದಿ ಮತ್ತು ಸಹಬಾಳ್ವೆಯನ್ನು ಸಾರುವ ಕುರಾನ್ನ ಪವಿತ್ರತೆಯ ಕುರಿತು ಧರ್ಮ ವಿಚಾರಗಳ ಮಂಥನ ನಡೆಸಿದರು.
ನಂತರ ನಗರದ ಪ್ರಮುಖ ಬೀದಿಗಳಲ್ಲಿ ಪ್ರವಾದಿ ಮಹ್ಮದ್ ಪೈಗಂಬರ್ ಅವರ ಜನ್ಮದಿನ ಮೆರವಣಿಗೆ ಕಾರ್ಯಕ್ರಮ ನಡೆಯಿತು. ನೂರಾರು ಮುಸಲ್ಮಾನ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿನ ಚಿಕ್ಕಪೇಟೆ, ಶಾಂತಿನಗರ, ಕೋಟೆರಸ್ತೆ, ಮುತ್ಸಂದ್ರ, ಮುತ್ತೂರು, ದರ್ಗಾಜೋಗಿಹಳ್ಳಿ ಸೇರಿದಂತೆ ಗ್ರಾಮಾಂತರದ ದೊಡ್ಡಬೆಳವಂಗಲ,ತೂಬಗೆರೆ, ಸಾಸಲು, ಆರೂಢಿ, ಕನಸವಾಡಿ ಹೋಬಳಿ ಕೇಂದ್ರಗಳಲ್ಲಿ ಮತ್ತು ಗ್ರಾಮಗಳಲ್ಲಿ ಕೂಡ ಸಂಭ್ರಮದ ಆಚರಣೆ ನಡೆಯಿತು. ವಿವಿಧೆಡೆಗಳಿಂದ ಬಂದಿದ್ದ ಜನ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

