ಬೆಂಗಳೂರು ಗ್ರಾಮಾಂತರ

ಸಾಧನಶೀಲತೆಗೆ ಪ್ರೋತ್ಸಾಹ ಅಗತ್ಯ

Published On :

ಕ.ಪ್ರ.ವಾರ್ತೆ ,  ದೊಡ್ಡಬಳ್ಳಾಪುರ ,  ಜ.17
ಇಲ್ಲಿನ ಲಾವಣ್ಯ ವಾರ್ಷಿಕೋತ್ಸವ ಸಮಾರಂಭ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಟಿ. ವೆಂಕಟರಮಣಯ್ಯ ಉದ್ಘಾಟಿಸಿದರು.
ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು-ಸಂಯಮ ಮತ್ತು ಸಾಧನಾಶೀಲತೆ ಇರಬೇಕು. ಆ ಗುಣಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಚೈತನ್ಯ ಶಿಕ್ಷಕರಲ್ಲಿರಬೇಕು. ಆಗ ಮಾತ್ರ ಕಲಿಕೆ ಪರಿಪೂರ್ಣವಾಗುತ್ತದೆ. ಉನ್ನತ ಆದರ್ಶಗಳ ತಳಹದಿಯಲ್ಲಿ ನಮ್ಮ ಭವಿಷ್ಯತ್ತನ್ನು ರೂಪಿಸುವ ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಇಂದಿನ ಅಗತ್ಯ. ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವುದು ಮಹತ್ವದ ಕೆಲಸ. ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಬುದ್ಧಿವಂತಿಕೆ ಅಳೆಯುವುದು ಸರಿಯಲ್ಲ ಎಂದರು.
ಸಂಸ್ಥೆಯ ಕಾರ್ಯದರ್ಶಿ ಎನ್. ಹನುಮಂತೇಗೌಡ ಮಾತನಾಡಿ, ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಹಂತದವರೆಗೆ ವಿವಿಧ ತರಗತಿಗಳು ನಡೆಯುತ್ತಿವೆ. ಫಲಿತಾಂಶ ಮತ್ತು ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಸಾಧನೆ ಗಣನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಪದಾಧಿಕಾರಿಗಳು, ಬೋಧಕ ಸಿಬ್ಬಂದಿ, ಸ್ಥಳೀಯ ಗಣ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.