ಬೆಂಗಳೂರು ಗ್ರಾಮಾಂತರ

ಲಸಿಕೆ ಕಡ್ಡಾಯವಾಗಿ ಹಾಕಿಸಿ

Published On :

ಮಾಗಡಿ: ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರ ಸಹಕಾರ ಅವಶ್ಯಕ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಎಲ್. ರಾಧ ನುಡಿದರು.
 ಅವರು ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ 5 ವರ್ಷದೊಳಗಿನ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬ ತಾಯಿಯೂ ತನ್ನ 5 ವರ್ಷದೊಳಗಿನ ಮಗುವಿಗೆ ಪೋಲಿಯೊ ಲಸಿಕೆ ಕಡ್ಡಾಯವಾಗಿ ಹಾಕಿಸಿ, ಮಗುವನ್ನು ಪೋಲಿಯೊ ಮುಕ್ತರನ್ನಾಗಿಸಲು ಸಹಕರಿಸಬೇಕು ಎಂದರು.
ಡಿ.ಎಲ್.ಓ. ಡಾ.ವಿ.ಸಿ. ಮೂರ್ತಿ ಮಾತನಾಡಿ ತಾಯಂದಿರು ತಪ್ಪದೆ ತಮ್ಮ ಮಕ್ಕಳಿಗೆ ಪೋಲಿಯೊ  ಲಸಿಕೆ ಹಾಕಿಸಬೇಕು. ಈ ಎರಡು ಹನಿಗೆ ಮಕ್ಕಳಿಗೆ ಮುಂದೆ ಬರುವ ಮಾರಕ ರೋಗಗಳನ್ನು ನಿಯಂತ್ರಿಸುವ ಶಕ್ತಿಯಿದೆ ಎಂದು ತಿಳಿಸಿದರು.
ಪಟ್ಟಣದಲ್ಲಿ 3,152 ಮಕ್ಕಳು, ಗ್ರಾಮೀಣ ಪ್ರದೇಶದಲ್ಲಿ 16,081 ಮಕ್ಕಳಿದ್ದು, ಒಟ್ಟಾರೆ  ತಾಲೂಕಿನಲ್ಲಿ ಒಟ್ಟು19,233 ಮಕ್ಕಳಿದ್ದಾರೆ. ಪಟ್ಟಣದಲ್ಲಿ 11, ಗ್ರಾಮೀಣ ಭಾಗದಲ್ಲಿ 80 ಬೂತ್‌ಗಳಿದ್ದು, ಒಟ್ಟು 91 ಬೂತ್ ್ಗಳಲ್ಲಿ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಏಕಕಾಲಕ್ಕೆ ಚಾಲನೆ ನೀಡಲಾಗಿದೆ ಎಂದು ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್. ಪ್ರಕಾಶ್ ತಿಳಿಸಿದರು.
 ಡಾ. ರಾಕೇಶ್, ಸೂಪರಿಂಟೆಂಡೆಂಟ್ ವಲಸಮ್ಮ, ಎಲ್.ಎಚ್.ವಿ. ಆರ್.ಜಮುನಾ, ಎಸ್.ಎಚ್.ಐ. ಶಿವಣ್ಣ, ನಾಗರಾಜು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.