ದೊಡ್ಡಬಳ್ಳಾಪುರದಲ್ಲಿ 4 ದಿನಗಳ ಪಲ್ಸ್ ಪೋಲಿಯೊ ಅಭಿಯಾನ ಆರಂಭ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನಾದ್ಯಂತ 4 ದಿನಗಳ ಕಾಲದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಅಭಿಯಾನ ಕಾರ್ಯಕ್ರಮ ಭಾನುವಾರ ಆರಂಭಗೊಂಡಿತು.
ತಾಲೂಕಿನ ಒಟ್ಟು 142 ಕೇಂದ್ರಗಳಲ್ಲಿ ಪೋಲಿಯೊ ಅಭಿಯಾನ ಆರಂಭವಾಗಿದ್ದು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮಾರ್ಗದರ್ಶನದಲ್ಲಿ ಅಭಿಮಾನ ನಡೆಯುತ್ತಿದ್ದು, ಇದರಲ್ಲಿ ಅಂಗನವಾಡಿಗಳ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ವಿದ್ಯಾರ್ಥಿ ಸ್ವಯಂ ಸೇವಕ ಪ್ರತಿನಿಧಿಗಳು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುತ್ತಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಭಾನುವಾರದಿಂದ ಬುಧವಾರದವರೆಗೆ ಲಸಿಕೆ ನೀಡಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಭಾನುವಾರದಿಂದ ಮಂಗಳವಾರದವರೆಗೆ ಕಾರ್ಯಕ್ರಮ ನಡೆಯಲಿದೆ. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ನೂರಾರು ತಾಯಂದಿರು ಪೋಲಿಯೊ ಲಸಿಕೆ ಕೇಂದ್ರಗಳಿಗೆ ತೆರಳಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿದರು. ಸೋಮವಾರದಿಂದ ಮನೆಮನೆಗೆ ತೆರಳಿ ಕಾರ್ಯಕರ್ತರು ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ತಾಲೂಕಿನ ಪ್ರಮುಖ ಹೋಬಳಿ ಕೇಂದ್ರಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸಾಸಲು, ಆರೂಡಿ, ಸಕ್ಕರೆಗೊಲ್ಲಹಳ್ಳಿ, ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ದೊಡ್ಡಹೆಜ್ಜಾಜಿ, ಹಣಬೆ, ಕೆಸ್ತೂರು, ಚನ್ನವೀರನಹಳ್ಳಿ, ತಳಗವಾರ, ಕನಸವಾಡಿ, ಕಾಡನೂರು, ಅರಳುಮಲ್ಲಿಗೆ, ದೊಡ್ಡತುಮಕೂರು, ತೂಬಗೆರೆ, ಹಾಡೋನಹಳ್ಳಿ, ಎಸ್.ಎಸ್.ಘಾಟಿ, ಮೇಲಿನಜೂಗಾನಹಳ್ಳಿ, ಕಂಟನಕುಂಟೆ, ನಾಗದೇನಹಳ್ಳಿ ಆರೋಗ್ಯ ಕೇಂದ್ರಗಳೂ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಅಭಿಯಾನ ಆರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

