ಬಯಲು ಶೌಚಾಲಯ ಬಳಸುತ್ತಿರುವುದು ದೇಶದ ದುರಂತ
ಕನಕಪುರ: ಶೌಚಾಲಯಗಳನ್ನು ಅಗತ್ಯಗಳ ಪಟ್ಟಿಯಲ್ಲಿರಿಸಿಕೊಳ್ಳದೆ ಬಯಲು ಶೌಚಾಲಯಗಳನ್ನು ಬಳಸುತ್ತಿರುವುದು ದೇಶದ ದುರಂತ ಎಂದು ರೇಷ್ಮೆ ಉದ್ದಿಮೆದಾರ ಪರಮೇಶ್ವರಪ್ಪ ಹೇಳಿದ್ದಾರೆ.
ಅವರು ಕನಕಪುರ ತಾಲೂಕು ದೊಡ್ಡಮರಳವಾಡಿ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಆಯೋಜಿಸಿದ್ದ ನಿರ್ಮಲ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಗ್ರಾಪಂ ಅಧ್ಯಕ್ಷ ಅಯೂಬ್ ಪಾಷ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸರ್ಕಾರ ಶೌಚಾಲಯ ನಿರ್ಮಾಣಕ್ಕಾಗಿ ನೀಡುತ್ತಿರುವ ವಿವಿಧ ಯೋಜನೆಗಳಲ್ಲಿನ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಯೊಂದು ಮನೆಯೂ ಶೌಚಾಲಯವನ್ನು ಹೊಂದಬಹುದು, ಜನರು ನಿರ್ಮಲಭಾರತ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಪಿಡಿಓ ಸಣ್ಣಪ್ಪ ಮಾತನಾಡಿ ಶೌಚಾಲಯ ನಿರ್ಮಿಸಿಕೊಳ್ಳಲು ಸಾಮಾನ್ಯ ಜನರಿಗೆ ಇಲಾಖೆಯಿಂದ 6 ಸಾವಿರ, ನರೇಗಾ ಕಾರ್ಡ್ ಹೊಂದಿರುವವರಿಗೆ 10 ಸಾವಿರ ಹಾಗೂ ಪ.ಜಾತಿ, ವರ್ಗಗಳ ಜನರಿಗೆ 15 ಸಾವಿರ ಸಹಾಯಧನ ನೀಡಲಾಗುತ್ತಿದೆ ಎಂದು ವಿವರಗಳನ್ನು ನೀಡಿದರು.
ತಾಪಂ ಸದಸ್ಯೆ ಸಿದ್ಧಿಕಾ ಪರ್ವೀನ್, ಮಾಜಿ ಅಧ್ಯಕ್ಷೆ ಪ್ರೇಮಾ ಸಿದ್ಧರಾಜು, ಉಪಾದ್ಯಕ್ಷೆ ಲಕ್ಷ್ಮಮ್ಮ ಪಾಲ್ಗೊಂಡಿದ್ದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಣ್ಣಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

