ಮಾನವೀಯ ಸಂಬಂಧ ಉಳಿಸಿಕೊಳ್ಳುವ ಶಿಕ್ಷಣ ಅಗತ್ಯ: ಪುಟ್ಟಣ್ಣ
ದೇವನಹಳ್ಳಿ: ಪೋಷಕರು ತಮ್ಮ ಮಕ್ಕಳು ಶಾಲೆಗಳಲ್ಲಿ ಎಷ್ಟು ಅಂಕ ಪಡೆಯುತ್ತಾರೆ ಎಂಬುದು ಮುಖ್ಯವಲ್ಲ ಅವರಿಗೆ ಸಮಾಜದಲ್ಲಿ ಹೇಗೆ ಬದುಕುತ್ತಾರೆ ಮತ್ತು ಮಾನವೀಯ ಸಂಬಂಧಗಳನ್ನು ಉಳಿಸಿಕೊಳ್ಳುವಂತಹ ಶಿಕ್ಷಣ ಬೇಕಾಗಿದೆ ಎಂದು ಮಾಜಿ ಉಪ ಸಭಾಪತಿ ಪುಟ್ಟಣ್ಣ ತಿಳಿಸಿದರು.
ಇಲ್ಲಿನ ಎಸ್ಎಲ್ಎಸ್ ರೆಸಿಡೆನ್ಷಿಯಲ್ ಪಬ್ಲಿಕ್ ಶಾಲೆಯ 11 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುಟ್ಟಣ್ಣ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದ ಅನೇಕ ಶ್ರೀಮಂತ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುವುದಲ್ಲದೆ ಅನೇಕ ಮಂದಿ ಕ್ರಿಮಿನಲ್ಗಳು ಆಗಿ ದೇಶಕ್ಕೆ ಮಾರಕರಾಗಿದ್ದಾರೆ. ಇಂತಹ ದುಷ್ಟರನ್ನು ತಯಾರಿಸುವ ಶಿಕ್ಷಣ ಬೇಕಾಗಿಲ್ಲ. ಮನುಷ್ಯರಲ್ಲಿ ಮಾನವೀಯ ಸಂಬಂಧಗಳನ್ನು ಬೆಸೆಯುವುಂತಹ ಸಂಸ್ಕೃತಿಯನ್ನು ಉಳಿಸುವಂತಹ ಶಿಕ್ಷಣ ಪೋಷಕರು ಮತ್ತು ಶಿಕ್ಷಕರು ನೀಡಬೇಕಾಗಿದೆ ಎಂದು ತಿಳಿಸಿದರು. ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ ಇಂದಿನ ದಿನಗಳಲ್ಲಿ ಶಾಲೆಗಳನ್ನು ನಡೆಸುವುದು ಸುಲಭದ ಮಾತಲ್ಲ. ಅಂತಹದರಲ್ಲಿ ಎಲ್ಲ ವರ್ಗದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಧನಂಜಯರವರ ಸೇವೆಯನ್ನು ಅಭಿನಂದಿಸಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಚಿತ್ರ ನಟಿ ನೀತು ಶಾಲೆಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರಲ್ಲದೆ ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡಿದರು. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎನ್.ತಿಮ್ಮಯ್ಯ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

