ಬೆಂಗಳೂರು ಗ್ರಾಮಾಂತರ

ಸಾವನದುರ್ಗದಲ್ಲಿ ಔಟ್ ಪೊಲೀಸ್ ಠಾಣೆ ನಿರ್ಮಾಣಕ್ಕೆ ಅಸ್ತು

Published On :

ಮಾಗಡಿ: ಐತಿಹಾಸಿಕ ಪ್ರಸಿದ್ಧ ಪ್ರವಾಸಿ ತಾಣ ಸಾವನದುರ್ಗದಲ್ಲಿ  ಔಟ್ ಪೊಲೀಸ್ ಠಾಣೆ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಅನಪಮ ಅಗರವಾಲ್ ತಿಳಿಸಿದರು.
ಅವರು ಮಾಗಡಿ ಪೊಲೀಸ್  ಠಾಣೆ ಆವರಣದಲ್ಲಿ ಶನಿವಾರ ಸುಮಾರು 10 ಲಕ್ಷ ರು. ವೆಚ್ಚದ ನೂತನ ಸಂದರ್ಶಕರ ಕೊಠಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ರಕ್ಷಣೆಗೆ ಪೊಲೀಸ್ ಸಿಬ್ಬಂದಿಗಳ ಕೊರತೆ ಹೆಚ್ಚಾಗಿದೆ. ಅದರಲ್ಲೂ ರಾಮನಗರ ಜಿಲ್ಲೆಯಲ್ಲಿಯೇ 185 ಪೊಲೀಸ್ ಸಿಬ್ಬಂದಿಗಳ ಕೊರತೆ ಎದುರಿಸಲಾಗುತ್ತಿದೆ. ಅಕ್ರಮ ಮರಳು ಮಾಫಿಯಾ, ಗಣಿಗಾರಿಕೆಗೆ ಆದಷ್ಟು ಕಡಿವಾಣ ಹಾಕಲಾಗಿದೆ. ತಮ್ಮೇನಹಳ್ಳಿ ಕೆರೆ ಅರಣ್ಯದ ಅಂಚಿನಲ್ಲಿರುವುದರಿಂದ ಮರಳು ಮಾಫಿಯಾ ಇನ್ನೂ ನಡೆಯುತ್ತಿದೆ ಎಂಬ ದೂರುಗಳಿದ್ದು, ಆದಷ್ಟು ಬೇಗ ಅಗತ್ಯ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ತಿಳಿಸಿದರು. ರಸ್ತೆ ಸುರಕ್ಷತೆಗಾಗಿ ಸದ್ಯದಲ್ಲೇ ಮಾಗಡಿ ಪಟ್ಟಣದ ವೃತ್ತಗಳಲ್ಲಿ ಸಿಗ್ನಲ್ ದೀಪಗಳನ್ನು ಅಳವಡಿಸಲು ಚಿಂತಿಸಲಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುಕೊಂಡು ಬರಲಾಗಿದೆ ಎಂದರು.
ಸಿಪಿಐ ಯಲಗಯ್ಯ ಮಾತನಾಡಿ ನನ್ನ ವೃತ್ತ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ ಇತರೆ ಅಪರಾಧಗಳಿಗೆ ಕಡಿವಾಣ ಹಾಕಲಾಗಿದೆ. ಠಾಣೆಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಠಾಣೆ ಆವರಣದಲ್ಲಿ ಸಾರ್ವಜನಿಕ ಸಂದರ್ಶಕರ ಕೊಠಡಿ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಿರುವುದಾಗಿ ತಿಳಿಸಿದರು.
ಸಾರ್ವನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಅನುಮಾನಸ್ಪಾದ ವ್ಯಕ್ತಿಗಳು ಕಂಡು ಬಂದರೆ ಕೂಡಲೆ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಬೇಕು. ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗದಂತೆ ರಸ್ತೆಗಳಲ್ಲಿ ಅಡ್ಡದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಬಾರದು, ನಾಗರಿಕರು ರಸ್ತೆ ಸುರಕ್ಷತೆ ಕಾಪಾಡಬೇಕು ಎಂದು ಪಿಎಸ್‌ಐ ಧರ್ಮೇಗೌಡ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.