ಪೇದೆ ಮನೆಯಲ್ಲಿ ಕಳವು, ಚಿನ್ನಾಭರಣ ದೋಚಿ ಪರಾರಿ
ನೆಲಮಂಗಲ: ಪಟ್ಟಣದ ಸುಭಾಷ್ ನಗರದ 40 ಅಡಿ ರಸ್ತೆಯಲ್ಲಿರುವ ಪೊಲೀಸ್ ಪೇದೆಯೊಬ್ಬರ ಮನೆ ಬೀಗ ಒಡೆದು ಕಳ್ಳರು ಸೋಮವಾರ ಮಧ್ಯಾಹ್ನ ಹಾಡಹಗಲೇ ಮನೆಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ಸಂಭವಿಸಿದೆ.
ಮನೆ ಮಾಲೀಕ ಪೊಲೀಸ್ ಪೇದೆ ರಂಗನಾಥ್ ಅವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಪೇದೆಯ ಮಗಳು ತರಕಾರಿ ತರುವುದಕ್ಕಾಗಿ ಹೊರಗಡೆ ಹೋಗಿರುವುದನ್ನು ಗಮನಿಸಿರುವ ದುಷ್ಕರ್ಮಿಗಳು ಮನೆಯ ಮುಂಭಾಗಿಲಿನ ಬೀಗವನ್ನು ಹಾರೆಯಿಂದ ಒಡೆದು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳೆದ ಒಂದು ತಿಂಗಳಿಂದ ಅತಿ ಹೆಚ್ಚು ಕಳ್ಳತನ ಪ್ರಕರಣಗಳು ಸಂಭವಿಸುತ್ತಿರುವುದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.
ಪೊಲೀಸರ ವಶದಲ್ಲಿದ್ದ ವಾಹನಗಳು ಬೆಂಕಿಗಾಹುತಿ
ನೆಲಮಂಗಲ: ಹಲವು ಪ್ರಕರಣದಡಿ ಪೊಲೀಸರ ವಶದಲ್ಲಿದ್ದ ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಪಟ್ಟಣದ ಕುಣಿಗಲ್ ರಸ್ತೆಯಲ್ಲಿ ನಡೆದಿದೆ. ಪೊಲೀಸರು ವಶಪಡಿಸಿಕೊಂಡಿದ್ದ ನೂರಾರು ವಾಹನಗಳಲ್ಲಿ 3 ಟಾಟಾ ಸುಮೋ ಹಾಗೂ 4 ಕಾರುಗಳು ದುಷ್ಕರ್ಮಿಗಳು ಇಟ್ಟ ಬೆಂಕಿಗೆ ಉರಿಯುತ್ತಿದ್ದನ್ನು ಪಕ್ಕದಲ್ಲೇ ಇದ್ದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿದರು. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

