ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳಲ್ಲಿ ಚಿಂತನೆ ಮೂಡಿಸಿ'

Published On :

ಕ.ಪ್ರ.ವಾರ್ತೆ   ದೊಡ್ಡಬಳ್ಳಾಪುರ   ಜ.20
ಸಾಂಸ್ಕೃತಿಕ ಚಿಂತನೆಗಳನ್ನಿ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ ಅನಿವಾರ್ಯತೆ ಮತ್ತು ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. ನೆಲದ ಸಂಸ್ಕೃತಿಯ ಬೇರುಗಳು ಗಟ್ಟಿಗೊಳ್ಳಬೇಕಿದೆ ಎಂದು ರಂಗಾಭರಣ ಕಲಾ ಕೇಂದ್ರದ ಅಧ್ಯಕ್ಷ ಎಂ.ಎಸ್. ಗುಣಶೀಲನ್ ಹೇಳಿದರು.
ಇಲ್ಲಿನ ಅರವಿಂದ ವಿದ್ಯಾ ಸಂಸ್ಥೆಯಲ್ಲಿ ನಡೆದ ಸಂಕ್ರಾಂತಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕಲಾವಂತಿಕೆ ಕೇವಲ ಮಾರುಕಟ್ಟೆ ಸರಕಾಗಿ ಬಳಕೆಯಾಗುತ್ತಿರುವುದು ವಿಷಾದನೀಯ. ನೈಜ ಕಲೆ ಜೀವನದ ಹಲವು ಮುಖಗಳನ್ನು ಪರಿಚಯ ಮಾಡಿಕೊಡುವ ಪರಿಪೂರ್ಣ ಚಿಂತನೆಯನ್ನು ಹೊಂದಿರುತ್ತದೆ. ಪ್ರದರ್ಶನಕ್ಕಾಗಿ ಕಲೆ ಅಲ್ಲ, ಬದುಕಿನ ಸಂವೇದನೆಗಳನ್ನು ಪ್ರಚೋದಿಸುವ ಕಲಾವಂತಿಕೆ ಅಗತ್ಯವಿದೆ. ದೊಡ್ಡಬಳ್ಳಾಪುರದ ನೆಲದಲ್ಲಿ ಹುಟ್ಟಿದ ಅನೇಕ ಕಲಾವಿದರು ಇಂದು ರಾಜ್ಯ ಮತ್ತು ದೇಶದಲ್ಲಿ ತನ್ನದೇ ಆದ ಪ್ರಬುದ್ಧತೆ ತೋರಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಅರವಿಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ತ.ನ.ಪ್ರಭುದೇವ್ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ಪ್ರಚೋದಿಸಿ ಬೆಳೆಸುವ ನಿರಂತರ ಪ್ರಯತ್ನವನ್ನು ಸಂಸ್ಥೆ ಮಾಡುತ್ತಿದೆ ಎಂದರು.
ವಿದ್ಯಾಗಾಯತ್ರಿನಗರ ಲಯನ್ಸ್ ಸಂಸ್ಥೆ ಅಧ್ಯಕ್ಷ ಮೆಳೇಕೋಟೆ ವೆಂಕಟೇಶ್, ಬಿ.ಎಚ್.ಕೆಂಪಣ್ಣ, ನಗರಸಭಾ ಸದಸ್ಯೆ ಸುಶೀಲಮ್ಮ, ರಮೇಶ್, ಫಾಹಿಮಾ ಬೇಗಂ, ಸರಸ್ವತಮ್ಮ, ಖಜಾಂಚಿ ವೆಂಕಪ್ಪ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.