ಎರಡನೇ ದಿನಕ್ಕೆ ಪ್ರತಿಭಟನಾ ಧರಣಿ
ದೇವನಹಳ್ಳಿ: ದೇವನಹಳ್ಳಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಸರ್ಕಾರ ಘೋಷಣೆ ಮಾಡುವವರೆಗೂ ನಿರಂತರ ಧರಣಿ ಸತ್ಯಾಗ್ರಹವನ್ನು ತಾಲೂಕಿನ ಜಿಲ್ಲಾ ಹೋರಾಟ ಸಮಿತಿ ಆರಂಭಿಸಿದೆ. ಎರಡನೇ ದಿನವಾದ ಮಂಗಳವಾರ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಧರಣಿಯಲ್ಲಿ ಭಾಗವಹಿಸಿರುವ ಎಲ್ಲ ಪ್ರತಿಭಟನಾಕಾರರು ಬಲಗೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಈ ಸಂಧರ್ಭದಲ್ಲಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ ದೇವನಹಳ್ಳಿಯಲ್ಲಿ ಮುಖ್ಯವಾಗಿ ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಾಲೂಕಿನ ರೈತರು ಜಮೀನು ನೀಡಿ ತ್ಯಾಗ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಮುಂದಿನ ಹತ್ತು ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಡಬೇಕು. ಸಂಚಾರ, ವಾಣಿಜ್ಯ ಅಲ್ಲದೆ ತಾಂತ್ರಿಕವಾದ ಐಟಿ ಬಿಟಿ ಕಂಪನಿಗಳು ಬರಲಿರುವುದರಿಂದ ಕೇವಲ ಜಿಲ್ಲಾಧಿಕಾರಿಗಳ ಕಚೇರಿ ಬಂದರೆ ಸಾಲದು ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯೊಂದಿಗೆ ಎಲ್ಲ ಜಿಲ್ಲಾ ಮಟ್ಟದ ಇಲಾಖೆಗಳ ಕಚೇರಿಗಳು ಇಲ್ಲಿಗೆ ವರ್ಗಾವಣೆಯಾಗಬೇಕು ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಮಹಿಳಾ ಸಂಘಟನೆಯ ಸೂರ್ಯಕಲಾ ಮೂರ್ತಿ, ಪುರಸಭಾ ಸದಸ್ಯ ಜಿ.ಎ.ರವೀಂದ್ರ, ತಾಲೂಕು ಪಂಚಾಯಿತಿ ಅಧ್ಯಕ್ಷೆ ರಾಧಿಕಾ ತ್ಯಾಗರಾಜ್ ಮಾತನಾಡಿದರು. ಜಿಲ್ಲಾ ಹೋರಾಟ ಸಮಿತಿಯ ಮುಖ್ಯ ಸಂಚಾಲಕ ಬಿ.ಕೆ.ಶಿವಪ್ಪ ಮಾತನಾಡಿ ನಮ್ಮ ಪ್ರತಿಭಟನೆ ಪ್ರತಿದಿನ ವಿವಿಧ ರೂಪ ತಾಳುವುದು. ಆದ್ದರಿಂದ ಎಲ್ಲ ಸಂಘ ಸಂಸ್ಥೆಗಳ, ಕನ್ನಡ ಪರ ಹೋರಾಟಗಾರರು ಅಲ್ಲದೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಮತ್ತು ಕಾರ್ಯಕರ್ತರ ಸಹಕಾರ ಅಗತ್ಯ ಎಂದರು. ಜ.26 ರಂದು ದೇವನಹಳ್ಳಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಬೇಕು ಎಂದರು.
ಧರಣಿ ಸತ್ಯಾಗ್ರಹದಲ್ಲಿ ಸೂಲಿಬೆಲೆಯ ಮಾಜಿ ಶಾಸಕ ಸೂ.ರಂ.ರಾಮಯ್ಯ, ಪುರಸಭಾ ಮಾಜಿ ಅಧ್ಯಕ್ಷರಾದ ಎಸ್.ಲಕ್ಷ್ಮೀನಾರಾಯಣ್, ರತ್ನಮ್ಮ ಗಾರೆ ರವಿಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಮುನಿರಾಜು, ಬಿಜೆಪಿ ತಾಲೂಕು ಅದ್ಯಕ್ಷ ರಾಜಗೋಪಾಲ್, ರಾಷ್ಟ್ರೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ, ರಾಜ್ಬಿಯ ಪರಿಷತ್ ಸದಸ್ಯ ದೇ.ಸೂ.ನಾಗರಾಜ್, ಜಿಲ್ಲಾ ರೈತ ಮೋರ್ಚಾ ಅದ್ಯಕ್ಷ ಹನುಮಂತರಾಯಪ್ಪ, ರಾಜಮಣಿ, ಸಾಹಿತಿ ವಿ.ನಂದೀಶ್, ದೇವನಹಳ್ಳಿ ಪುರಸಭೆ ಸದಸ್ಯರು, ಬೂದಿಗೆರೆ ಲಯನ್ಸ್ ಸಂಸ್ಥೆ ಅಧ್ಯಕ್ಷ ರಮೇಶ್, ನಿವೃತ್ತ ಶಿಕ್ಷಕ ಇ.ಸಿ.ಚನ್ನಬಸವರಾಜು, ಸುಬ್ಬಣ್ಣ ಅಲ್ಲದೆ ಅನೇಕ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

